Public School: ಪೊಲೀಸರ ಮಕ್ಕಳಿಗೆ 7 ಹೊಸ ಪಬ್ಲಿಕ್ ಸ್ಕೂಲ್

Public School: ಪೊಲೀಸರ ಮಕ್ಕಳಿಗೆ 7 ಹೊಸ ಪಬ್ಲಿಕ್ ಸ್ಕೂಲ್,ರಾಜ್ಯದ ಪ್ರಮುಖ 7 ಕಡೆಗಳಲ್ಲಿ ಸ್ಥಾಪನೆ.

ಪೊಲೀಸ್ ಮಕ್ಕಳಿಗೆ 7 ಪಬ್ಲಿಕ್ ಸ್ಕೂಲ್: ಪೋಲಿಸ್ ಸಂಸ್ಮರಣ ದಿನದಲ್ಲಿ ಸಿಎಂ ಘೋಷಣೆ ಮಾಡಿದರು.

 

ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಹುತಾತ್ಮ ಪೊಲೀಸ್‌ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದ ಅವರು, ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ 2025ರಲ್ಲಿ 10 ಸಾವಿರ ಪೊಲೀಸ್‌ ವಸತಿ ಮನೆಗಳ ನಿರ್ಮಾಣಕ್ಕೆ 2,000 ಕೋಟಿ ರೂ. ನೀಡಿದ್ದೇವೆ. 200 ಕೋಟಿ ರೂ. ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸರ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲು ನಿರ್ಧರಿಸಿದ್ದೇವೆ ಎಂದರು.

ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಇವರ ಆತ್ಮಕ್ಕೆ ನಾನು ಶಾಂತಿ

ಕೋರುತ್ತಾ, ಅವರ ಕುಟುಂಬಗಳಿಗೆ ಸಂತಾಪ ಸೂಚಿಸಲು ಬಯಸುತ್ತೇನೆ. ದೇಶದ, ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವ, ಜನರ ಪ್ರಾಣ, ಮಾನ ಕಾಪಾಡುವ ಪವಿತ್ರ ಕಾರ್ಯದಲ್ಲಿ ಇವರೆಲ್ಲಾ ಹುತಾತ್ಮರಾಗಿದ್ದಾರೆ.

ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೊಲೀಸ್ ಸಿಬ್ಬಂದಿ. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು. ಅಸಮಾನತೆ ಇರುವ ಸಮಾಜದಲ್ಲಿ ಶೋಷಣೆ, ದೌರ್ಜನ್ಯಗಳೂ ಇರುತ್ತವೆ. ಈ ಶೋಷಿತರ ಸಂವಿಧಾನಬದ್ಧವಾದ ಹಕ್ಕುಗಳನ್ನು ಕಾಪಾಡಲು ಮುಖ್ಯ ಪಾತ್ರ ವಹಿಸುವವರು ನಮ್ಮ ಪೊಲೀಸರು. ಇವರ ಜೊತೆಗೆ ಸರ್ಕಾರ ಇರುತ್ತದೆ. ಅಪರಾಧ ತಡೆಯಲು 6000 ಸಿಸಿ ಕ್ಯಾಮರಾಗಳು, 260ಕ್ಕೂ ಹೆಚ್ಚು ಹೆದ್ದಾರಿ ಗಸ್ತು ವಾಹನಗಳು ಕರ್ತವ್ಯ ನಿರ್ವಹಿಸುತ್ತಿವೆ. ಎಂದರು.

ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುವವರ ಮಕ್ಕಳಿಗೆ ಸುಸಜ್ಜಿತ ಶಿಕ್ಷಣವನ್ನು ನೀಡಲು ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ರಾಜಧಾನಿಯಲ್ಲಿ ಸೋಮವಾರ ಆಯೋಜಿಸಿದ್ದ ಪೊಲೀಸ್

ಸಂಸ್ಮರಣಾ ದಿನದ ಸಮಾರಂಭದಲ್ಲಿ ಹುತಾತ್ಮ ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿ ಈ ವಿಷಯ ತಿಳಿಸಿದ್ದಾರೆ. ರಾಜ್ಯದ ಏಳು ಪ್ರಮುಖ ಸ್ಥಳಗಳಲ್ಲಿ ಪೊಲೀಸರ ಮಕ್ಕಳಿಗಾಗಿ 

ವಿಶೇಷ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸಲಾಗುತ್ತದೆ ಎಂದು ಹೇಳಿದ್ದಾರೆ. ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ದವಾಗಿದೆ. ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅವರು ತಿಳಿಸಿದರು. ಗೃಹ ಸಚಿವ ಜಿ.ಪರಮೇಶ್ವರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ‘ಅತೀಕ್ ಎಲ್.ಕೆ., ಗೃಹ ಕಾರ್ಯದರ್ಶಿ ಉಮಾಶಂಕ‌ರ್, ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಇತರರಿದ್ದರು.

ಸುರಕ್ಷತೆಗೆ ಕ್ರಮ:

ಅಪರಾಧ ತಡೆಯಲು 6,000 ಸಿಸಿ ಕ್ಯಾಮರಾಗಳು, 260ಕ್ಕೂ ಹೆಚ್ಚು ಹೆದ್ದಾರಿ ಗಸ್ತು ವಾಹನಗಳು ಕರ್ತವ್ಯ ನಿರ್ವಹಿಸುತ್ತಿವೆ ಎಂದು ಸಿಎಂ ಮಾಹಿತಿ ನೀಡಿದರು. ವಸತಿ ಸೌಲಭ್ಯ: ಪ್ರಸಕ್ತ ಸಾಲಿನಲ್ಲಿ ಒಟ್ಟು 10 ಸಾವಿರ ಪೊಲೀಸ್ ವಸತಿಗೃಹಗಳ ನಿರ್ಮಾಣಕ್ಕೆ 2,000 ಕೋಟಿ ನೀಡಿದ್ದೇವೆ. 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ ಎಂದು ಸಿಎಂ ಮಾಹಿತಿ ನೀಡಿದರು.

ಹುತಾತ್ಮರಿಗೆ ಗೌರವ

ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216, ರಾಜ್ಯದಲ್ಲಿ 12 ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದಲ್ಲಿರುವಾಗಲೇ ಹುತಾತ್ಮರಾಗಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡುವಾಗ, ಜನರ ಪ್ರಾಣ, ಮಾನ ಕಾಪಾಡುವ ಹೊತ್ತಲ್ಲಿ ಇವರೆಲ್ಲ ಹುತಾತ್ಮರಾಗಿದ್ದಾರೆ. ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಇವರ ಜವಾಬ್ದಾರಿ ಬಹಳ ದೊಡ್ಡದು. ಸಂವಿಧಾನಬದ್ದವಾದ ಹಕ್ಕುಗಳನ್ನು ಕಾಪಾಡುವಲ್ಲಿ ಇವರ ಪಾತ್ರ ಮಹತ್ತರವಾಗಿದ್ದು, ಇವರ ಜತೆಗೆ ಸರ್ಕಾರ ಇರುತ್ತದೆ ಎಂದರು.

 

Leave a Comment