Railway Jobs: ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ-2025
Railway jobs: ಕಳೆದ ಒಂದು ವರ್ಷದಲ್ಲಿ ರೈಲ್ವೆ ಇಲಾಖೆಯಲ್ಲಿ 92,116 ಹುದ್ದೆಗಳಿಗೆ . ನೇಮಖಾತಿ ನಡೆಸಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಇದಕ್ಕಾಗಿ 71.77 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 2014-20150 2023-248 ನಡುವೆ ಒಟ್ಟಾರೆಯಾಗಿ 5.02 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದ್ದು, ಅದರ ಹಿಂದಿನ 10 ವರ್ಷಗಳಲ್ಲಿ ಈ ಸಂಖ್ಯೆ 4.11 ಲಕ್ಷ ಆಗಿತ್ತು ಎಂದು ತಿಳಿಸಲಾಗಿದೆ.
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಈ ವಿವರ ನೀಡಿದ್ದಾರೆ. 2024ರಲ್ಲಿ ಒಟ್ಟು 92,116 ಹುದ್ದೆಗಳ ಭರ್ತಿಗಾಗಿ ಕೇಂದ್ರಿಕೃತ ಉದ್ಯೋಗ ಅಧಿಸೂಚನೆಗಳನ್ನು
ಪ್ರಕಟಿಸುವ ಮೂಲಕ ಅತಿ ದೊಡ್ಡ ನೇಮಕಾತಿ ಪ್ರಕ್ರಿಯೆಯನ್ನು ನಡೆಸುತ್ತಿದೆ.
20248 ಜನವರಿಯಿಂದ ಡಿಸೆಂಬರ್ ವರೆಗೆ ಈ ಅಧಿಸೂಚನೆಗಳನ್ನು ಹೊರಡಿಸಲಾಗಿದೆ. ಅಸಿಸ್ಟೆಂಟ್ ಲೋಕೋ ಪೈಲಟ್, ಟೆಕ್ನಿಷಿಯನ್ಸ್, ಸಬ್ ಇನ್‌ಸ್ಪೆಕ್ಟರ್, ಕಾನ್‌ಸ್ಟೆಬಲ್, ಜೂನಿಯರ್ ಇಂಜಿನಿಯರ್(ಜೆಇ), ಡಿಪೋ ಮೆಟಿರಿಯಲ್ ಸೂಪರಿಂಟೆಂಡೆಂಟ್ (ಡಿಎಂಎಸ್), ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ಸ್, ಪ್ಯಾರಾ ಮೆಡಿಕಲ್ ಸ್ಟಾಫ್, ನಾನ್ ಟೆಕ್ನಿಕಲ್ ಪ್ಯಾಪುಲರ್ ಕೆಟಗರಿ, (ಎನ್‌ಟಿಪಿಸಿ) ಹಾಗೂ ಇತರ ಕೆಳ ಹಂತದ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ ಎಂದು ವಿವರ ನೀಡಿದ್ದಾರೆ.
ಕೋವಿಡ್ ಸಾಂಕ್ರಾಮಿಕದ ನಿರ್ಬಂಧಗಳನ್ನು ತೆರವುಗೊಳಿಸಿದ ಬಳಿಕ ನಡೆಸಲಾದ ಎರಡು ಪ್ರಮುಖ ನೇಮಕಾತಿ ಪರೀಕ್ಷೆಗಳಲ್ಲಿ 2.37 ಕೋಟಿ ಅಭ್ಯರ್ಥಿಗಳು ಹಾಜರಾಗಿದ್ದರು. ಅದರಲ್ಲಿ 1,30,581 ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ.
