Recent News-2025: ಉತ್ತಮ ಶಿಕ್ಷಕರಿಗೆ ಪ್ರೋತ್ಸಾಹಧನ:ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ
Recent News-2025: ಉತ್ತಮ ಶಿಕ್ಷಕರಿಗೆ ಪ್ರೋತ್ಸಾಹಧನ: ಮಕ್ಕಳ ದಾಖಲಾತಿ ಹೆಚ್ಚಳ, ಉತ್ತಮ ಫಲಿತಾಂಶ ಸೇರಿ ಸರ್ಕಾರಿ ಶಾಲೆಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಶಿಕ್ಷಕರಿಗೆ ಪ್ರೋತ್ಸಾಹಧನ (ಇನ್ಸೆಂಟಿವ್) ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸಾಕಷ್ಟು ಸೌಕರ್ಯ ಒದಗಿಸಿದರೂ ಬಹಳಷ್ಟು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಫಲಿತಾಂಶ ಕುಸಿಯುತ್ತಿದೆ. ಹೀಗಾಗಿ ಅಂತಹ ಶಾಲೆಗಳ ಶಿಕ್ಷಕರಿಗೆ ಶಿಕ್ಷೆ ಕೊಡುವ ವ್ಯವಸ್ಥೆಯೂ ನಮ್ಮಲ್ಲಿದೆ ಎಂದು ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಮುಂದಿನ ವರ್ಷದಿಂದಲೇ ಸರ್ಕಾರಿ ಶಾಲೆಗಳ ಶಿಕ್ಷಕರನ್ನು ಗುರುತಿಸುವ ಪ್ರೋತ್ಸಾಹಧನ ವಿತರಣೆಗೆ ನಿಯಾಮಾವಳಿ ರೂಪಿಸಲಾಗುವುದು. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದಾರೆ. ಎಲ್ಲರೂ ಮೆರಿಟ್ ಮೇಲೆ ಕೆಲಸ ಗಿಟ್ಟಿಸಿಕೊಂಡಿದ್ದಾರೆ. ಹೀಗಾಗಿ ಅವರಿಂದ ಉತ್ತಮ ಫಲಿತಾಂಶ ನಿರೀಕ್ಷಿಸಲಾಗುತ್ತಿದೆ. ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದೊರಕಿಸಿಕೊಡುವ ನಿಟ್ಟಿನಲ್ಲಿ ಶಿಕ್ಷಕರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಬಾರದು ಎಂದು ಹೇಳಿದರು.