Karnataka Lokayukta Recruitment-2024-25: Application Invitation for Recruitment of 30 Clerk-cum-Typist Posts of Lokayukta; Here is the complete information about the recruitment.

Recruitment of candidates for the posts of Clerk-cum-Typist

Karnataka Lokayukta Recruitment-2024-25 : ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್-ಸಿ ವೃಂದದ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳನ್ನು ನೇರ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ.

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್-‘ಸಿ’ ವೃಂದದ ಉಳಿಕೆ ಮೂಲ ವೃಂದದಲ್ಲಿ ಖಾಲಿಯಿರುವ 16 ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳನ್ನು ತುಂಬಲು ಕರ್ನಾಟಕ ಲೋಕಾಯುಕ್ತ (ವೃಂದ ನೇಮಕಾತಿ ಮತ್ತು ಸಿಬ್ಬಂದಿ ಹಾಗೂ ಅಧಿಕಾರಿಗಳ ಸೇವಾ ಷರತ್ತು) ನಿಯಮಗಳು 1988 ರ ಅನುಬಂಧ- ‘ಎ’ ಮತ್ತು ಕೆ.ಸಿ.ಎಸ್ (ಸಾಮಾನ್ಯ ನೇಮಕಾತಿ) ನಿಯಮಗಳು 1977 ಹಾಗೂ ಅಧಿಸೂಚನೆ ಸಂಖ್ಯೆ:ಡಿಪಿಎಆರ್ 19 ಎಸ್ ಸಿ ಆರ್ 2006 ದಿನಾಂಕ:14-08-2006 ರನ್ವಯ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ವೆಬ್‌ಸೈಟ್ https://lokayukta.kar.nic.in ನಲ್ಲಿ (on-line) ಮೂಲಕ ಸಲ್ಲಿಸಲು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆನ್-ಲೈನ್ (on-line) (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

1) ಕ್ಲರ್ಕ್-ಕಂ-ಟೈಪಿಸ್ಟ್:- 16 ಹುದ್ದೆಗಳು

2) ವೇತನ ಶ್ರೇಣಿ: 34100-800-35700-900-39300-1000-43300-1125-47800-1250-52800-1375-58300-1500-64300-1650-67600

3) ಹುದ್ದೆಗಳ ವರ್ಗೀಕರಣ:-

ಸರ್ಕಾರಿ ಆದೇಶ ಸಂಖ್ಯೆ:ಸಿಆಸುಇ 01 ಸೆಹಿಮ 2022, ದಿನಾಂಕ:28-12-2022 ಮತ್ತು ಸರ್ಕಾರಿ ಆದೇಶ ಸಂಖ್ಯೆ:ಸಿಆಸುಇ 02 ಸಹಿಮ 2023, ದಿನಾಂಕ:08-03-2024ರ ಪ್ರಕಾರ ಹುದ್ದೆಗಳನ್ನು ಕೆಳಕಂಡಂತೆ ವರ್ಗೀಕರಿಸಲಾಗಿದೆ.

 

3.ಶೈಕ್ಷಣಿಕ ವಿದ್ಯಾರ್ಹತೆ :-

1.ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಉತ್ತೀರ್ಣ ಅಥವಾ ತತ್ರಮಾನ.

2.ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣ ಅಥವಾ ತತ್ಸಮಾನ

(ಮೂಲ ಅಂಕಪಟ್ಟಿಯನ್ನು ಅರ್ಹತಾ ಪರೀಕ್ಷೆಗೆ ಕರೆ ಬಂದಾಗ ಪರಿಶೀಲನೆಗಾಗಿ ಹಾಜರುಪಡಿಸುವುದು).

ಸೂಚನೆ:

ಎ) ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯ ಕಮರ್ಷಿಯಲ್ ಪ್ರಾಕ್ಸಿಸ್‌ನ ಬೆರಳಚ್ಚು, ವಿಷಯಗಳ ತೇರ್ಗಡೆಯ ತತ್ಸಮಾನತೆ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ಇಡಿ:174 ಟಿಪಿಇ 2005,ಬೆಂಗಳೂರು.ಆದೇಶವನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಅಧಿಕೃತ ಜಾಲತಾಣದಲ್ಲಿ(ವೆಬ್ ಸೈಟ್) ಅಧಿಸೂಚನೆ ವಿಭಾಗದಲ್ಲಿ ವಿಕ್ಷಿಸಬಹುದು)

ಬಿ) ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಯ ತತ್ಸಮಾನ ವಿದ್ಯಾರ್ಹತೆಯನ್ನು ಸರ್ಕಾರದ ಸುತ್ತೋಲೆ ಸಂಖ್ಯೆ ಸಿಆಸುಇ 81 ಸೇವನೆ 2017, ದಿನಾಂಕ:27/02/2018ರಲ್ಲಿ ತಿಳಿಸಿರುವಂತೆ ಪರಿಗಣಿಸಲಾಗುವುದು. (ಸದರಿ ಸರ್ಕಾರದ ಸುತ್ತೋಲೆಯನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಜಾಲತಾಣದಲ್ಲಿ (ವೆಬ್ ಸೈಟ್) ಅಧಿಸೂಚನೆ ವಿಭಾಗದಲ್ಲಿ ವಿಕ್ಷಿಸಬಹುದು.

4.ನೇಮಕಾತಿ ಪ್ರಕ್ರಿಯೆ:

Karnataka Lokayukta Recruitment-2024-25

1) ಕರ್ನಾಟಕ ಲೋಕಾಯುಕ್ತ (ವೃಂದ & ನೇಮಕಾತಿ ಮತ್ತು ಸಿಬ್ಬಂದಿ ಹಾಗೂ ಅಧಿಕಾರಿಗಳ ಸೇವಾ ಷರತ್ತು) (ತಿದ್ದುಪಡಿ) ನಿಯಮಗಳು 2005ರ ಅನುಬಂಧ-‘ಎ’ ರಲ್ಲಿ ತಿಳಿಸಿದಂತೆ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗೆ ನಿಗಧಿಪಡಿಸಲಾದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಮತ್ತು ಮೀಸಲಾತಿ ಆಧಾರದ ಮೇರೆಗೆ ಶ್ರೇಯಾಂಕದಲ್ಲಿರುವ ಅಭ್ಯರ್ಥಿಗಳ ಪೈಕಿ 1:10 ಅನುಪಾತದಲ್ಲಿ ಅರ್ಹತಾ ಪಟ್ಟಿಯನ್ನು ತಯಾರಿಸಿ, ಸದರಿ ಪಟ್ಟಿಯಲ್ಲಿ ಇರುವಂತಹ ಅಭ್ಯರ್ಥಿಗಳಿಗೆ ಈ ಕಛೇರಿಯಿಂದ ಅರ್ಹತಾ ಪರೀಕ್ಷೆ ನಡೆಸಲಾಗುವುದು. ಸದರಿ ಅರ್ಹತಾ ಪರೀಕ್ಷೆಗೆ ನಿಗಧಿಪಡಿಸಲಾದ ಗರಿಷ್ಠ 20 ಅಂಕಗಳಿಗೆ ಅಭ್ಯರ್ಥಿಯು ಕನಿಷ್ಠ ಶೇ.50 ರಷ್ಟು ಅಂಕಗಳನ್ನು ಪಡೆದಲ್ಲಿ ಮಾತ್ರ ಆಯ್ಕೆ ಪಟ್ಟಿಗೆ ಪರಿಗಣಿಸಲಾಗುವುದು.

2) ಪರೀಕ್ಷಾ ವಿಧಾನ:

ಅರ್ಹತಾ ಪರೀಕ್ಷೆಯನ್ನು ಬೆರಳಚ್ಚು ಯಂತ್ರ / ಗಣಕಯಂತ್ರದ ಮೂಲಕ ಕೈಗೊಳ್ಳಲಾಗುವುದು.

5) ಅರ್ಜಿ ಶುಲ್ಕ:

ಸಾಮಾನ್ಯ ಅರ್ಹತೆ, ಪ್ರವರ್ಗ-2(ಎ), 2(ಬಿ),3(ಎ), 3(ಬಿ) ಮತ್ತು ಮಾಜಿ ಸೈನಿಕರಿಗೆ- 250/-

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ- ಶುಲ್ಕ ವಿನಾಯಿತಿ ಇರುತ್ತದೆ.

6.ಅರ್ಜಿ ಶುಲ್ಕ ಪಾವತಿ ವಿಧಾನ:

(ಅ) ನಿಗದಿತ ಶುಲ್ಕವನ್ನು ಕರ್ನಾಟಕ ಲೋಕಾಯುಕ್ತ ಕಚೇರಿಯ ಅಧಿಕೃತ ವೆಬ್‌ಸೈಟ್‌ https://lokayukta.kar.nic.in ನಲ್ಲಿ ಒದಗಿಸಲಾದ ಲಿಂಕ್ ಮೂಲಕ ಕೆನರಾ ಬ್ಯಾಂಕ್ ( Canara Bank) Collect ಮೂಲಕ ನಿಗದಿತ ಶುಲ್ಕವನ್ನು Online Payment through Canara e pay modes/ Net Banking or credit or Debit Card or UPI ID ಸೌಲಭ್ಯದ ಮೂಲಕ ಮಾತ್ರ ಪಾವತಿಸತಕ್ಕದ್ದು, ಇದನ್ನು ಹೊರತುಪಡಿಸಿ ಯಾವುದೇ ಚಲನ್/ಡಿಮ್ಯಾಂಡ್ ಡ್ರಾಮ್/ ಪೊಸ್ಟಲ್ ಆರ್ಡರ್/ ಮನಿ ಆರ್ಡರ್, ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿ ಮಾಡದೇ ಇರುವ ಸಾಮಾನ್ಯ ವರ್ಗ, ಪ್ರವರ್ಗ-2ಎ ಪ್ರವರ್ಗ-2ಬಿ, ಪ್ರವರ್ಗ-3ಎ ಪ್ರವರ್ಗ-3ಬಿ ಮೀಸಲಾತಿಗೆ ಸೇರಿದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಆ) ಒಮ್ಮೆ ಪಾವತಿ ಮಾಡಿದ ಶುಲ್ಕವನ್ನು ಯಾವುದೇ ಸಂದರ್ಭದಲ್ಲೂ ಹಿಂದಿರುಗಿಸಲಾಗುವುದಿಲ್ಲ.

(ಇ) ಆನ್-ಲೈನ್ ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಗಳು ಏನಾದರೂ ಕಂಡುಬಂದಲ್ಲಿ ಸಹಾಯವಾಣಿ ಸಂಖ್ಯೆ: 080-22011297 ಗೆ ಕಚೇರಿ ಕೆಲಸದ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

(ಈ) ಅಭ್ಯರ್ಥಿಗಳಿಗೆ ನೀಡಿರುವ ಸೂಚನೆಗಳಲ್ಲಿ ಮೀಸಲಾತಿ, ವಿದ್ಯಾರ್ಹತೆ ಮುಂತಾದ ವಿಷಯಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಕೆಲಸದ ವೇಳೆಯಲ್ಲಿ ದೂರವಾಣಿ ಸಂಖ್ಯೆ:080-22011210 / 080-22011279 ಗೆ ಸಂಪರ್ಕಿಸಬಹುದಾಗಿದೆ.

(ಉ) ಅಭ್ಯರ್ಥಿಯು ಭಾವಚಿತ್ರ ಮತ್ತು ಸಹಿ ಸ್ಕ್ಯಾನ್ ಮಾಡಿ ಆಪ್ ಲೋಡ್ ಮಾಡಲು ಈ ಕೆಳಕಂಡ ನಿರ್ದೇಶನಗಳನ್ನು ಪಾಲಿಸತಕ್ಕದ್ದು.

1) ಬಣ್ಣದ ಭಾವಚಿತ್ರವು ಇತ್ತೀಚಿನದ್ದಾಗಿದ್ದು, ಗರಿಷ್ಠ 50 ಕೆ.ಬಿ ಅಳತೆಯಿರುವ 5 ಸೆಂ.ಮೀ. ಉದ್ದ x 3.6 ಸೆಂ.ಮೀ ಅಗಲವಿರಬೇಕು ಹಾಗೂ ಅದು ಜೆಪಿಜಿ ನಮೂನೆಯಲ್ಲಿರಬೇಕು. ಭಾವಚಿತ್ರದ ಹಿನ್ನೆಲೆ ಬಿಳಿ ಬಣ್ಣದಾಗಿರಬೇಕು.

2) ಭಾವಚಿತ್ರವನ್ನು ಸ್ಕ್ಯಾನ್ ಮಾಡಿ ಅರ್ಜಿಗೆ ಅಪ್‌ಲೋಡ್ ಮಾಡಬೇಕು (ಯಾವುದೇ ಕಾರಣಕ್ಕೂ ಭಾವಚಿತ್ರದ ಮೇಲೆ ಸಹಿ ಮಾಡಬಾರದು.

3) ಅಭ್ಯರ್ಥಿಯು ಬಿಳಿ ಕಾಗದದ ಮೇಲೆ ಕಪ್ಪು ಬಾಲ್ ಪಾಯಿಂಟ್ ಪೆನ್‌ನಲ್ಲಿ (2.5 ಸೆಂ.ಮೀ ಅಗಲ x 7.5 ಸೆಂ.ಮೀ. ಉದ್ದವಿರುವ ಗರಿಷ್ಠ 25 ಕೆ.ಬಿ ಪ್ರಮಾಣವಿರುವಂತೆ) ತಮ್ಮ ಸಹಿ ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕು ಹಾಗೂ ಅದು ಜೆಪಿಜಿ ನಮೂನೆಯಲ್ಲಿರಬೇಕು.

7.ವಯೋಮಿತಿ:-

1.ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕದಂದು ಎಲ್ಲಾ ಪ್ರವರ್ಗದವರಿಗೆ ಕನಿಷ್ಠ 18 ವರ್ಷಗಳು ತುಂಬಿರಬೇಕು ಹಾಗೂ

2.ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 166 ಸೆನೆನಿ 2024, ದಿನಾಂಕ:10/09/2024ರಲ್ಲಿ ಆದೇಶಿಸಿರುವಂತೆ ಈ ಅಧಿಸೂಚನೆಯಲ್ಲಿ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿ ಈ ಕೆಳಕಂಡಂತೆ ಗರಿಷ್ಠ ವಯೋಮಿತಿ ನಿಗಧಿಪಡಿಸಲಾಗಿರುತ್ತದೆ.

ಅ. ಪ.ಜಾ/ಪ.ಪಂ/ಪ್ರ-1- 43 ವರ್ಷ
ಬ. 2 A, 2B,3A,3B- 41 ವರ್ಷ
ಕ. ಸಾಮಾನ್ಯ ಅಭ್ಯರ್ಥಿಗಳಿಗೆ- 38 ವರ್ಷ

ಕರ್ನಾಟಕ ಸಿವಿಲ್ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು 1977ರ 6ನೇ ನಿಯಮದ ಅನುಸಾರ ಈ ಕೆಳಗಿನ ಸಂದರ್ಭಗಳಲ್ಲಿ ಸದರಿ ನಿಯಮಗಳಲ್ಲಿ ನಿಗಧಿಪಡಿಸಿರುವ ಗರಿಷ್ಟ ವಯೋಮಿತಿಯನ್ನು ಕೆಳಗೆ ತಿಳಿಸಿರುವಷ್ಟು ಮಟ್ಟಿಗೆ ಹೆಚ್ಚಿಸಲಾಗುವುದು. ಕನಿಷ್ಠ ಮತ್ತು ಗರಿಷ್ಟ ವಯೋಮಿತಿಯು ಆನ್-ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕವನ್ನು ಆಧರಿಸಿರುತ್ತದೆ.

(1) ಅಭ್ಯರ್ಥಿಯು, ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಅಥವಾ ಸ್ಥಳೀಯ ಪ್ರಾಧಿಕಾರದಲ್ಲಿ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಯಾದ ಅಥವಾ ರಾಜ್ಯ ಅಧಿನಿಯಮದ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಗೊಂಡು ರಾಜ್ಯ ಸರ್ಕಾರದ ಸ್ವಾಮ್ಯ ಅಥವಾ ನಿಯಂತ್ರಣದಲ್ಲಿರುವ ಸ್ಥಳೀಯ ನಿಗಮದಲ್ಲಿ ಹುದ್ದೆ ಹೊಂದಿರುವ ಅಥವಾ ಹಿಂದೆ ಹೊಂದಿದ್ದಲ್ಲಿ ಸೇವೆ ಸಲ್ಲಿಸುತ್ತಿರುವರೋ ಅಥವಾ ಹಿಂದೆ ಸಲ್ಲಿಸಿದ್ದರೋ ಅಷ್ಟು ವರ್ಷಗಳು ಅಥವಾ 10 ವರ್ಷ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳು..

(2) ಅಭ್ಯರ್ಥಿಯು ಮಾಜಿ ಸೈನಿಕನಾಗಿದ್ದಲ್ಲಿ ಅವನು ಸಶಸ್ತ್ರ ದಳದಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವನೋ ಆ ವರ್ಷಗಳಿಗೆ 03 ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳು ಆಗುವುದೋ ಅಷ್ಟು ವರ್ಷಗಳು.

ವಿವರಣೆ: (ಎ) ಮಾಜಿ ಸೈನಿಕ ಎಂದರೆ ಸಶಸ್ತ್ರ ದಳಗಳಾದ ನಿಯಮಿತ ಭೂದಳ, ನೌಕಾದಳ ಮತ್ತು ವಾಯುದಳದಲ್ಲಿ ಯಾವುದೇ ಶ್ರೇಣಿಯಲ್ಲಿ (ಯೋಧ ಅಥವಾ ಯೋಧರಲ್ಲದ ಹುದ್ದೆಗಳಲ್ಲಿ) ಸೇವೆ ಸಲ್ಲಿಸಿದ ವ್ಯಕ್ತಿ. ಆದರೆ ಡಿಫೆನ್ಸ್ ಸೆಕ್ಯೂರಿಟಿ ಕೋರ್. ಜನರಲ್ ರಿಸರ್ವ್ ಇಂಜಿನಿಯರಿಂಗ್ ಫೋರ್ಸ್, ಲೋಕಸಹಾಯಕ ಸೇನಾ ಮತ್ತು ಪ್ಯಾರಾ ಮಿಲಿಟರಿ ದಳದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಸೇರ್ಪಡೆಯಾಗುವುದಿಲ್ಲ ಮತ್ತು (ಬಿ) ಕೇಂದ್ರ ಸಶಸ್ತ್ರ ದಳಗಳಲ್ಲಿ ಸೇವೆ ಸಲ್ಲಿಸುವಾಗ ಹತರಾದ ಅಥವಾ ಶಾಶ್ವತವಾಗಿ ದೈಹಿಕ ವಿಕಲತೆಹೊಂದಿದ ವ್ಯಕ್ತಿಗಳ ಕುಟುಂಬದವರು (ಸಂದರ್ಭಾನುಸಾರ ಹೆಂಡತಿ ಅಥವಾ ಗಂಡ ಮತ್ತು ಮಕ್ಕಳು ಮತ್ತು ಮಲ ಮಕ್ಕಳು) ಮಾಜಿ ಸೈನಿಕ ಮೀಸಲಾತಿಗೆ ಅರ್ಹರಾಗಿರುತ್ತಾರೆ. ಆದರೆ ಅಂಥಹ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದಿಲ್ಲ.

(ಅ) ಮೇಲ್ಕಂಡ ದಳದ ಸೇನೆಯಿಂದ ನಿವೃತ್ತಿ ಹೊಂದಿದ ನಂತರ ನಿವೃತ್ತಿ ವೇತನ ಪಡೆಯುತ್ತಿರುವ

ಅಥವಾ

(ಆ) ವೈದ್ಯಕೀಯ ಕಾರಣಗಳಿಂದ ಮಿಲಿಟರಿ ಸೇವೆಯಿಂದ ಬಿಡುಗಡೆಯಾದ ಅಥವಾ ವ್ಯಕ್ತಿಯ ಹಿಡಿತಕ್ಕೂ ಮೀರಿದ ಪರಿಸ್ಥಿತಿಗಳಿಂದ ಮತ್ತು ವೈದ್ಯಕೀಯ ಅಥವಾ ಅಸಾಮರ್ಥ್ಯದ ಪಿಂಚಣಿ ಪಡೆದು ಸೇವೆಯಲ್ಲಿ ಬಿಡುಗಡೆಯಾದವನು

ಅಥವಾ

(ಇ) ಸ್ವಂತ ಕೋರಿಕೆ ಹೊರತುಪಡಿಸಿ ಸಿಬ್ಬಂದಿ ಕಡಿತದ ಪರಿಣಾಮದಿಂದ ಅಂತಹ ಸೇನೆಯಿಂದ ಬಿಡುಗಡೆಹೊಂದಿದ ವ್ಯಕ್ತಿ

ಅಥವಾ

(ಈ) ತನ್ನ ಸ್ವಂತ ಕೋರಿಕೆ ಮೇರೆಗೆ ಅಥವಾ ದುರ್ನಡತೆ ಅಥವಾ ಅಸಾಮರ್ಥ್ಯದ ಕಾರಣದಿಂದಾಗಿ ತೆಗೆದುಹಾಕಿರುವ ಅಥವಾ ಕರ್ತವ್ಯದಿಂದ ವಜಾ ಮಾಡಿದ ವ್ಯಕ್ತಿಗಳನ್ನು ಹೊರತುಪಡಿಸಿ ನಿರ್ದಿಷ್ಟ ಅವಧಿಯನ್ನು ಪೂರೈಸಿದ ತರುವಾಯ ಬಿಡುಗಡೆಹೊಂದಿದ ವ್ಯಕ್ತಿ ಮತ್ತು ಗ್ರಾಚ್ಯುಟಿ ಪಡೆಯುತ್ತಿರುವ ವ್ಯಕ್ತಿ ಮತ್ತು ಪ್ರಾಂತೀಯ ಸೇವೆಯ ಈ ಕೆಳಗೆ ಹೆಸರಿಸಿದ ವರ್ಗದ ಸಿಬ್ಬಂದಿಯವರು

i) ನಿರಂತರ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಪಿಂಚಣಿದಾರರು.
(ii) ಮಿಲಿಟರಿ ಸೇವೆಯಿಂದಾಗಿ ಉಂಟಾದ ದೈಹಿತ ಅಸಾಮರ್ಥ್ಯತೆ ಹೊಂದಿ ಬಿಡುಗಡೆಯಾದ ವ್ಯಕ್ತಿ.
iii) ಗ್ಯಾಲಂಟ್ರಿ ಪ್ರಶಸ್ತಿ ವಿಜೇತರು.

iii) ರಾಷ್ಟ್ರೀಯ ಕೆಡೆಟ್ ಕಾರ್ಪ್ ಅಭ್ಯರ್ಥಿಯಾಗಿದ್ದಲ್ಲಿ, ಅವರು ಸೇವೆ ಸಲ್ಲಿಸಿರುವಷ್ಟು ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
(iv) ಅಭ್ಯರ್ಥಿಯು ಗ್ರಾಮ ಸಮೂಹ ಪರಿಶೀಲಕರಾಗಿ ಕಾರ್ಯನಿರ್ವಹಿಸಿದಲ್ಲಿ, ಅವರು ಸೇವೆ ಸಲ್ಲಿಸಿರುವಷ್ಟು ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ
(v) ಅಭ್ಯರ್ಥಿಯು ದೈಹಿಕ ಅಂಗವಿಕಲತೆ ಹೊಂದಿರುವ ಸಂದರ್ಭದಲ್ಲಿ 10 ವರ್ಷಗಳ ವಯೋ- -ಮಿತಿಯಲ್ಲಿ ಸಡಿಲಿಕೆ ಇರುತ್ತದೆ.
(vi) ಅಭ್ಯರ್ಥಿಯು ಜನಗಣತಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿದ್ದಲ್ಲಿ, ಅವರು ಸೇವೆ ಸಲ್ಲಿಸಿರುವಷ್ಟು ವರ್ಷಗಳು ಅಥವಾ 05 ವರ್ಷಗಳು, ಇವೆರಡರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
(vii) ಅಭ್ಯರ್ಥಿಯು ವಿಧವೆಯಾಗಿರುವ ಸಂದರ್ಭದಲ್ಲಿ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
(viii) ಅಭ್ಯರ್ಥಿಯು ಜೀತ ಕಾರ್ಮಿಕರಾಗಿದ್ದಲ್ಲಿ, 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅಭ್ಯರ್ಥಿಗಳ ಜನ್ಮ ದಿನಾಂಕವನ್ನು ಅವರ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ವಿದ್ಯಾರ್ಹತೆಯ ಪ್ರಮಾಣಪತ್ರದಲ್ಲಿ ನಮೂದಿಸಿರುವಂತೆ ಪರಿಗಣಿಸಲಾಗುವುದು. ಈ ಹೊರತು ಇತರೆ ಯಾವುದೇ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ).

ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಪ್ರಾರಂಭದ ದಿನಾಂಕ:30/10/2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:29/11/2024 (ಮಧ್ಯರಾತ್ರಿ 11:59 ಗಂಟೆಯವರೆಗೆ)

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:30/11/2024 (ಮಧ್ಯರಾತ್ರಿ 11:59 ಗಂಟೆಯವರೆಗೆ).

CLICK HERE TO DOWNLOAD NOTIFICATIONRPC-CCT

CLICK HERE TO DOWNLOAD NOTIFICATION- KKR-CCT

CLICK HERE TO ONLINE APPLICATION

 

Leave a Comment