Recruitment of Medical Officer posts|ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಯಲ್ಲಿ ಅವಕಾಶ -2025

Recruitment of Medical Officer posts|ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಯಲ್ಲಿ ಅವಕಾಶ -2025

Recruitment of Medical Officer posts

ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ | ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಯಲ್ಲಿ ಅವಕಾಶ

ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳು (ಎಎಫ್ ಎಂಎಸ್) ರಕ್ಷಣಾ ಸಚಿವಾಲಯದಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸೇವಾ ಸಂಸ್ಥೆಯಾಗಿದೆ. ಪ್ರಸ್ತುತ ಈ ಸಂಸ್ಥೆಯು ವೈದ್ಯಕೀಯ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಪುರುಷ ಮತ್ತು ಮಹಿಳಾ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 12ರೊಳಗೆ ಅರ್ಜಿ ಸಲ್ಲಿಸಬೇಕು.

ಹುದ್ದೆಗಳ ಸಂಖ್ಯೆ:

ಪುರುಷ ಅಭ್ಯರ್ಥಿಗಳು-300
ಮಹಿಳಾ ಅಭ್ಯರ್ಥಿಗಳು- 100

ಅರ್ಹತೆ:

MBBS ಅನ್ನು ಎರಡು ಅಟೆಮ್ಸ್‌ನೊಳಗೆ (2023, 2024) ಪೂರ್ಣಗೊಳಿಸಿರುವವರು, ನೀಟ್ ಪಿಜಿ ಪರೀಕ್ಷೆ ಬರೆದಿರುವವರು, 2025ರ ಮಾ.31ರೊಳಗೆ ಅಥವಾ ಅದಕ್ಕೂ ಪೂರ್ವದಲ್ಲಿ ಇಂಟರ್ನ್ ಶಿಪ್ ಪೂರ್ಣಗೊಳಿಸಿರುವವರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ:

ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಎಂಬಿಬಿಎಸ್ / ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?

ಅಭ್ಯರ್ಥಿಗಳು  ನೀಟ್ ಪಿಜಿಯಲ್ಲಿ ಪಡೆದ ಅಂಕ  ಆಧರಿಸಿ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಈ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ವೈದ್ಯಕೀಯ ಪರೀಕ್ಷೆಗೆ ಆಯ್ಕೆ ಮಾಡಲಾಗುತ್ತದೆ. ವೈದ್ಯಕೀಯ ಪರೀಕ್ಷೆಯ ನಂತರ ವಿವಾ-ವೋಸ್/ಸಂದರ್ಶನ ನಡೆಸಿ ಅಂತಿಮ ಪಟ್ಟಿ ತಯಾರಿಸಲಾಗುತ್ತದೆ. ನಂತರ ಮೇರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳಿಗೆ ಆರ್ಮಿ ಹಾಸ್ಪಿಟಲ್ ಡೆಲ್ಲಿ ಕ್ಯಾಂಟ್‌ನಲ್ಲಿ ಸಂದರ್ಶನ ನಡೆಸಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?

ಆನ್‌ಲೈನ್‌ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಮತ್ತು ಐಡಿ ಪೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿರಿಸಿಕೊಳ್ಳಿ. ನಂತರ ಎಎಫ್‌ಎಂಎಸ್ ನೇಮಕಾತಿ ಅಧಿಸೂಚನೆ 2025ರ ಲಿಂಕ್ ಅನ್ನು ಕ್ಲಿಕ್ ಮಾಡಿ. ಎಎಫ್‌ಎಂಎಸ್ ಆನ್ ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ (ಅನ್ವಯಿಸಿದರೆ) ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

ಅರ್ಜಿ ಶುಲ್ಕದ ವಿವರ:

ಹುದ್ದೆಗೆ ಅರ್ಜಿ ಸಲ್ಲಿಸಿದ ಎಲ್ಲ ವರ್ಗದ ಅಭ್ಯರ್ಥಿಗಳು 200ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ವೇತನ ವಿವರ :

ಆಯ್ಕೆಯಾದ ಅಭ್ಯರ್ಥಿಗಳಿಗೆ 61,300 ರೂ. ವೇತನವನ್ನು ನೀಡಲಾಗುತ್ತದೆ. ವೇತನದ ಜತೆಗೆ ಮನೆ ಬಾಡಿಗೆ ಭತ್ಯೆ, ಸಾರಿಗೆ ಭತ್ಯೆ ಸೇರಿ ಇತರ ಸೌಲಭ್ಯವನ್ನು ಒದಗಿಸಲಾಗುತ್ತದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೇ ದಿನ- 12-05-2025

ಸಂದರ್ಶನದ ತಾತ್ಕಾಲಿಕ ದಿನಾಂಕ: 19.06.2025

ಹೆಚ್ಚಿನ ಮಾಹಿತಿಗಾಗಿ – https://join.afms.gov.in/

 

ಇದನ್ನೂ ನೋಡಿ…UPSC ಯಲ್ಲಿ ನೇಮಕಾತಿ-2025

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!