SBI RECRUITMENT OF CIRCLE BASED OFFICERS 2025: ಭಾರತೀಯ ಸ್ಟೇಟ್ ಬ್ಯಾಂಕ್ ದಲ್ಲಿ ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.
SBI CBO Post Recruitment 2025: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತೆ ಸರ್ಕಲ್ ಬೇಸ್ಡ್ ಆಫೀಸರ್ (CBO) ನೇಮಕಾತಿ 2025 ರ ಅಡಿಯಲ್ಲಿ 2600 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಆರಂಭ ಮಾಡಿದೆ.
▪️ಒಟ್ಟು ಹುದ್ದೆಗಳ ಸಂಖ್ಯೆ: 2600
ಈ ಹಿಂದೆ ಅರ್ಜಿ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳು ಈಗ ಜೂನ್ 21 ರಿಂದ ಜೂನ್ 30 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.
▪️ನೇಮಕಾತಿಗೆ ಅರ್ಹತೆ ಏನು?
ಈ ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಿದಂತೆ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಾಸಾಗಿರಬೇಕು. ಅಲ್ಲದೆ, ವೈದ್ಯಕೀಯ, ಎಂಜಿನಿಯರಿಂಗ್ ಅಥವಾ ಸಿಎ ನಂತಹ ವೃತ್ತಿಪರ ಕೋರ್ಸ್‌ಗಳನ್ನು ಹೊಂದಿರುವವರು ಕೂಡ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇದಲ್ಲದೆ, ಅಭ್ಯರ್ಥಿಯು ಬ್ಯಾಂಕಿಂಗ್ ವಲಯ ಅಥವಾ ಯಾವುದೇ ಹಣಕಾಸು ಸಂಸ್ಥೆಗೆ ಸಂಬಂಧಿಸಿದಂತೆ ಕನಿಷ್ಠ 2 ವರ್ಷಗಳ ಕೆಲಸದ ಅನುಭವವನ್ನು ಪಡೆದಿರಬೇಕಾದದು ಮುಖ್ಯ.
▪️ವಯೋಮಿತಿ ವಿವರ:
ಈ ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಅಭ್ಯರ್ಥಿಯ ವಯಸ್ಸು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳು ಆಗಿರಬೇಕು. ಎಸ್‌ಸಿ/ಎಸ್‌ಟಿ/ಒಬಿಸಿಯಂತಹ ಮೀಸಲು ವರ್ಗಗಳು ಸರ್ಕಾರವು ನಿಗದಿಪಡಿಸಿದ ವಯೋಮಿತಿ ಸಡಿಲಿಕೆಗಳ ಪ್ರಯೋಜನವನ್ನು ಪಡೆಯುತ್ತವೆ.
ಅರ್ಜಿ ಶುಲ್ಕದ ವಿವರ:
▪️ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಭರಣ ಮಾಡುವುದು ಮುಖ್ಯ. ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು 750 ರೂ. ಶುಲ್ಕವನ್ನು ಪಾವತಿಸಬೇಕಾಗುತ್ತದೆ.
▪️ ಎಸ್‌ಸಿ/ಎಸ್‌ಟಿ ಮತ್ತು ಪಿಡಬ್ಲ್ಯೂಡಿ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ. ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು 750 ರೂ. ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಎಸ್‌ಸಿ/ಎಸ್‌ಟಿ ಮತ್ತು ಪಿಡಬ್ಲ್ಯೂಡಿ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಕೆ ಮಾಡುವ ವಿಧಾನ ಹೇಗೆ?
ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಮೊದಲು ibpsonline.ibps.in/sbicboapr25/ ವೆಬ್ಸೈಟ್ ಗೆ ಭೇಟಿ ನೀಡಬೇಕು.
“ಹೊಸ ನೋಂದಣಿಗಾಗಿ ಇಲ್ಲಿ ಕ್ಲಿಕ್ ಮಾಡಿ” ಮೇಲೆ ಕ್ಲಿಕ್ ಮಾಡಿ ಮತ್ತು ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ.
ಇದಾದ ನಂತರ ನಿಮ್ಮ ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ.
ನಂತರ ಅಭ್ಯರ್ಥಿಗಳು ಉಳಿದ ವಿವರಗಳನ್ನು ಭರ್ತಿ ಮಾಡಿ, ಫಾರ್ಮ್ ಅನ್ನು ಪೂರ್ವವೀಕ್ಷಣೆ ಮಾಡಿ ಶುಲ್ಕವನ್ನು ಸಲ್ಲಿಸಬೇಕು.
ಅರ್ಜಿಯನ್ನು ಭರ್ತಿ ಮಾಡಿದ ನಂತರ, ಅದರ ಮುದ್ರಣವನ್ನು ನಿಮ್ಮ ಬಳಿ ಸುರಕ್ಷಿತವಾಗಿ ಇಟ್ಟುಕೊಳ್ಳಿ.
▪️ ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ: 30-06-2025
Apply Online(Re-Open) –CLICK HERE
Download Notice for Re-Open Application: CLICK HERE
Download Official Notification: CLICK HERE
Official Website: CLICK HERE