Scheduled Caste Survey-2025: ಪರಿಶಿಷ್ಟ ಜಾತಿ ಸಮೀಕ್ಷೆಯ ವಿಧಾನ ಮತ್ತು ವೇಳಾಪಟ್ಟಿ ವಿವರ

Scheduled Caste Survey-2025: ಪರಿಶಿಷ್ಟ ಜಾತಿ ಸಮೀಕ್ಷೆಯ ವಿಧಾನ ಮತ್ತು ವೇಳಾಪಟ್ಟಿ ವಿವರ

Scheduled Caste Survey-2025:

ಗೌರವಾನ್ವಿತ ನ್ಯಾಯಮೂರ್ತಿ ಹೆಚ್‌.ಎನ್.ನಾಗಮೋಹನದಾಸ್

ಏಕ ಸದಸ್ಯ ವಿಚಾರಣಾ ಆಯೋಗ

(ಪರಿಶಿಷ್ಟ ಜಾತಿ – ಒಳ ಮೀಸಲಾತಿ ವರ್ಗೀಕರಣ)

ಮಾನ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರು ರವರ ಅಧ್ಯಕ್ಷತೆಯಲ್ಲಿ ದಿನಾಂಕ: 23-04-2025 ರಂದು ಬೆಳಿಗ್ಗೆ 10.00 ಗಂಟೆಗೆ ಜಿಲ್ಲಾಧಿಕಾರಿಗಳು/ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು/ ಜಿಲ್ಲಾ ಪೊಲೀಸ್ ಅಧೀಕ್ಷಕರೊಂದಿಗೆ ಪರಿಶಿಷ್ಟ ಜಾತಿ- ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕುರಿತು ವಿಡಿಯೋ ಸಂವಾದ ಸಭೆ.

▪️ಒಳ ಮೀಸಲಾತಿ ಕುರಿತು ಟಿಪ್ಪಣಿ

▪️ಸಂವಿಧಾನದ 341 ನೇ ವಿಧಿಯ ಅಡಿಯಲ್ಲಿ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿರುತ್ತದೆ.

▪️ಮೀಸಲಾತಿಯ ಪ್ರಯೋಜನವು ಎಲ್ಲಾ ಜಾತಿಗಳಿಗೂ ಸಮಾನವಾಗಿ ತಲುಪುವಂತೆ ಮಾಡಲು, ಪರಿಶಿಷ್ಟ ಜಾತಿಗಳ ವರ್ಗೀಕರಣಕ್ಕಾಗಿ ಸಮುದಾಯದ ಕೆಲವು ಗುಂಪುಗಳು ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದವು.

▪️ಈ ಸಂಬಂಧ, ಸರ್ಕಾರವು ದಿನಾಂಕ:24-09-2005 ರಲ್ಲಿ ನಿವೃತ್ತ ಗೌರವಾನ್ವಿತ ನ್ಯಾಯಮೂರ್ತಿ ಎ.ಜೆ. ಸದಾಶಿವ ಅವರ ನೇತೃತ್ವದಲ್ಲಿ ಆಯೋಗವನ್ನು ನೇಮಿಸಿತ್ತು.

▪️ಆಯೋಗವು 2011 ರ ಜನಗಣತಿಯ ಆಧಾರದ ಮೇಲೆ ಜನಸಂಖ್ಯೆ ಮತ್ತು ಇತರ ವಿವರಗಳನ್ನು ಸಂಗ್ರಹಿಸಿ 2012 ರಲ್ಲಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ, ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳನ್ನು 04 ಗುಂಪುಗಳಾಗಿ ವಿಂಗಡಿಸಿ ಈ ಕೆಳಕಂಡಂತೆ ಆಂತರಿಕ ಮೀಸಲಾತಿಗೆ ಶಿಫಾರಸ್ಸು ಮಾಡಿತು.

▪️ಹೊಸ ಸಮೀಕ್ಷೆ ನಡೆಸಲು ಪ್ರಮುಖವಾಗಿ ಗಮನಿಸಬೇಕಾದ ಅಂಶಗಳು

1. ಕರ್ನಾಟಕದ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಜಾತಿಗಳ ಉಪಜಾತಿಗಳ ಮಾಹಿತಿಯನ್ನು ಕಡ್ಡಾಯವಾಗಿ ನಮೂದಿಸಬೇಕು.

2. ಆದಿ ಕರ್ನಾಟಕ, ಆದಿ ದ್ರಾವಿಡ, ಅದಿ ಆಂಧ್ರ ಎಂದು ನಮೂದಿಸಿದ್ದರೆ ಅಂಥವರು ಅದರ ಜೊತೆಗೆ ತಮ್ಮ ಉಪಜಾತಿಯನ್ನು ಕಡ್ಡಾಯವಾಗಿ ನಮೂದಿಸಬೇಕು.

3.3. ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಉಪಜಾತಿಗಳ ಸಮಗ್ರ ಸಮೀಕ್ಷೆಯನ್ನು ಕೈಗೊಳ್ಳಬೇಕು. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಜಾತಿಯವರು ನಿರ್ದಿಷ್ಟವಾದ ಉಪಜಾತಿಗಳನ್ನು ಕಡ್ಡಾಯವಾಗಿ ನಮೂದಿಸಬೇಕು. ಪ್ರಮುಖವಾಗಿ ಪರಿಶಿಷ್ಟ ಜಾತಿಯ ಉಪ ಜಾತಿಗಳ ಜನಸಂಖ್ಯೆ, ಕುಟುಂಬಗಳ ಸಂಖ್ಯೆ, ಪಡೆದಿರುವ ಶಿಕ್ಷಣ, ವೃತ್ತಿ, ವಾಸಿಸುವ ಪ್ರದೇಶ, ಹೊಂದಿರುವ ಸೌಲಭ್ಯಗಳು ಮುಂತಾದ ಸಾಮಾನ್ಯ ಮಾಹಿತಿಗಳು, ಆರ್ಥಿಕತೆಗೆ ಸಂಬಂಧಿಸಿದ ಮಾಹಿತಿಗಳು, ಸರ್ಕಾರಿ ಉದ್ಯೋಗ, ಖಾಸಗಿ ಉದ್ಯೋಗ, ವೃತ್ತಿ, ಭೂಮಿಯ ಒಡೆತನ, ಮನೆ, ಆದಾಯ, ಮಾನವ ಅಭಿವೃದ್ಧಿ, ಸರ್ಕಾರದಿಂದ ಪಡೆದಿರುವ ಸೌಲಭ್ಯಗಳು, ರಾಜಕೀಯ ಪ್ರಾತಿನಿಧ್ಯತೆ ಇತ್ಯಾದಿ ವಿಷಯಗಳ ಕುರಿತು ಸಮಗ್ರವಾದ ಮಾಹಿತಿಯನ್ನು ಒಳಗೊಂಡ ಸಮೀಕ್ಷೆ ನಡೆಯಬೇಕು ಎಂದು ತಿಳಿಸಲಾಗಿದೆ.

ಸರ್ಕಾರದ ಆದೇಶ ಸಂಖ್ಯೆ: SWD/8/SLP/2025 ದಿನಾಂಕ: 09-04-2025 ರಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗಿಕರಣ ಕುರಿತು ರಾಜ್ಯ ಮಟ್ಟದ/ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಈ ಕೆಳಕಂಡಂತೆ 04 ಸಮನ್ವಯ ಸಮಿತಿಗಳನ್ನು ರಚಿಸಿ ಆದೇಶಿಸಲಾಗಿರುತ್ತದೆ.

ಸಮೀಕ್ಷೆಯ ವಿಧಾನ ಮತ್ತು ವೇಳಾಪಟ್ಟಿ ವಿವರ:

▪️ದಿನಾಂಕ:16-04-2025 ಮತ್ತು 21-04-2025 ರಂದು ನಡೆದ ರಾಜ್ಯ ಮಟ್ಟದ ಸಮಿತಿ ಸಭೆಯಲ್ಲಿ ಸಮೀಕ್ಷೆ ಕುರಿತು ಕೆಳಕಂಡ ನಿರ್ಣಯಗಳನ್ನು ಕೈಗೊಳ್ಳಲಾಗಿರುತ್ತದೆ.

1. ಸಮೀಕ್ಷೆಗೆ ಕಡ್ಡಾಯವಾಗಿ ಶಿಕ್ಷಕರನ್ನು ಗಣತಿದಾರರನ್ನಾಗಿ (Enumerators) ನೇಮಕ ಮಾಡುವುದು.

2. ಜಿಲ್ಲಾಧಿಕಾರಿಗಳ ಹಂತದಲ್ಲಿ ಗಣತಿದಾರರನ್ನು (Enumerators) ಮೇಲ್ವಿಚಾರಕರನ್ನು (Supervisors) ಗುರುತಿಸಿ ನೇಮಕ ಮಾಡಿ ಆದೇಶಿಸುವುದು. ಮತ್ತು

3. ಸಮೀಕ್ಷೆಯ ವಿಧಾನವನ್ನು ಕೆಳಕಂಡ 03 ಹಂತಗಳಲ್ಲಿ ಕೈಗೊಳ್ಳುವುದು.

 

ಸಂಪೂರ್ಣ ಮಾಹಿತಿಗಾಗಿ- CLICK HERE

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!