School Tour-2024: ಶೈಕ್ಷಣಿಕ ಪ್ರವಾಸ ರದ್ದು? ಗಾಳಿಸುದ್ದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಏನು ಸ್ಪಷ್ಟನೆ ನೀಡಿದೆ?

School Tour: ಶೈಕ್ಷಣಿಕ ಪ್ರವಾಸ ರದ್ದು? ಗಾಳಿಸುದ್ದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಏನು ಸ್ಪಷ್ಟನೆ ನೀಡಿದೆ.?

ಶಾಲಾ ಶಿಕ್ಷಣ ಇಲಾಖೆಯ ಶಾಲೆಗಳ 2024-25 ನೇ ಸಾಲಿನ ಶೈಕ್ಷಣಿಕ ಪ್ರವಾಸ ಕುರಿತು ವಾಟ್ಸಾಪ್ನಲ್ಲಿ ಹರಿದಾಡುತ್ತಿದೆ ಎನ್ನಲಾದ ಸಂದೇಶದ ಕುರಿತು ಸ್ಪಷ್ಟಿಕರಣ.

ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ -1 ರಲ್ಲಿ ಕೆಲ ಜಿಲ್ಲಾ ಉಪ ನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ ಇವರು ದೂರವಾಣಿ ಕರೆ ಮಾಡಿ ಪ್ರಸ್ತುತ ಶಾಲಾ ಶಿಕ್ಷಣ ಇಲಾಖೆಯ ಶಾಲೆಗಳ ವತಿಯಿಂದ 2024-25 ನೇ ಸಾಲಿನಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಶೈಕ್ಷಣಿಕ ಪ್ರವಾಸ ಕುರಿತು ವಾಟ್ಸಾಪ್ನಲ್ಲಿ/ಇತರೆ ಜಾಲತಾಣಗಳಲ್ಲಿ ಸದರಿ ಶೈಕ್ಷಣಿಕ ಪ್ರವಾಸ ರದ್ದು ಮಾಡಿರುವ ಬಗ್ಗೆ ಹಾಗೂ ಈಗಾಗಲೇ ಪ್ರವಾಸ ಹೊರಟಿದ್ದಲ್ಲಿ ಕೂಡಲೇ ಹಿಂದಿರುಗಿ ಬರುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಸೂಚಿಸಿರುವುದಾಗಿ ವ್ಯಾಪಕವಾಗಿ ಪ್ರಚಾರವಾಗಿರುವುದರಿಂದ ಈ ಕುರಿತು ಸ್ಪಷ್ಟಿಕರಣವನ್ನು ನೀಡುವಂತೆ ಕೋರಿರುತ್ತಾರೆ.

ಈ ಹಿನ್ನೆಲೆಯಲ್ಲಿ ಈ ಕೆಳಕಂಡಂತೆ ಸೃಷ್ಟಿಕರಣ ನೀಡಲಾಗಿದೆ:

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಈ ಮೇಲಿನಂತೆ ಶಾಲಾ ಶಿಕ್ಷಣ ಇಲಾಖೆಯ ಶಾಲೆಗಳ ವತಿಯಿಂದ 2024-25 ನೇ ಸಾಲಿನಲ್ಲಿ ಪ್ರಸ್ತುತ ಹಮ್ಮಿಕೊಳ್ಳಲಾಗುತ್ತಿರುವ ಶೈಕ್ಷಣಿಕ ಪ್ರವಾಸ ಮಾಡದಂತೆ / ಹಮ್ಮಿಕೊಂಡಿದ್ದಲ್ಲಿ ಕೂಡಲೇ ಹಿಂತಿರುಗಿ ಬರುವಂತೆ ಯಾವುದೇ ಸೂಚನೆ /ನಿರ್ದೇಶನ ನೀಡಿರುವುದಿಲ್ಲ. ಎಂದು ಸ್ಪಷ್ಟ ಪಡಿಸಲಾಗಿದೆ.

ಮುಂದುವರೆದು ಶಾಲಾ ಶಿಕ್ಷಣ ಇಲಾಖೆಯ ಶಾಲೆಗಳ ವತಿಯಿಂದ 2024-25 ನೇ ಸಾಲಿನಲ್ಲಿ ಪ್ರಸ್ತುತ ಹಮ್ಮಿಕೊಳ್ಳಲಾಗುತ್ತಿರುವ ಶೈಕ್ಷಣಿಕ ಪ್ರವಾಸಗಳನ್ನು ಉಲ್ಲೇಖ 2 ಮತ್ತು 3 ರಲ್ಲಿ ನೀಡಿರುವ ಸೂಚನೆಗಳು ಮತ್ತು ನಿರ್ದೇಶನಗಳಂತೆ ಹಾಗೂ ಈ ಕೆಳಕಂಡ ಅಂಶಗಳನ್ನೊಳಗೊಂಡಂತೆ ಡಿಸೆಂಬರ್ 2024 ಮಾಹೆಯೊಳಗೆ ಪೂರ್ಣಗೊಳಿಸುವುದು.

1.ಪ್ರವಾಸವನ್ನು ವ್ಯವಸ್ಥಿತವಾಗಿ ಕೈಗೊಳ್ಳಲು ಪೂರ್ವಭಾವಿಯಾಗಿ ಯೋಜನೆ ಯನ್ನು ಕೈಗೊಳ್ಳುವುದು ಹಾಗೂ ಅದರಂತೆ ಪ್ರವಾಸವನ್ನು ಕೈಗೊಳ್ಳುವುದು.

2 ಪ್ರವಾಸದ ಸಂಧರ್ಭದಲ್ಲಿ ಮಕ್ಕಳನ್ನು ಯಾವುದೇ ಅಪಾಯಕಾರಿ ಸ್ಥಳಗಳಿಗೆ ಕರೆದುಕೊಂಡು ಹೋಗಬಾರದು, ಹಾಗೂ ಎಲ್ಲ ಸ್ಥಳಗಳಲ್ಲಿ ಮತ್ತು ಸಂದರ್ಭಗಳಲ್ಲಿ ಪ್ರವಾಸದ ಉಸ್ತುವಾರಿ ವಹಿಸಿದ ಸಿಬ್ಬಂದಿಯವರು ವಿದ್ಯಾರ್ಥಿಗಳ ಜೊತೆ ಇದ್ದು ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಎಲ್ಲ ಅವಶ್ಯ ಕ್ರಮಗಳನ್ನು ಕೈಗೊಳ್ಳುವುದು.

3.ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಉಂಟಾಗುವ ಯಾವುದೇ ಅವಘಡಕ್ಕೆ/ಹಾನಿಗೆ ಸಂಭಂಧಿಸಿದ ಶಾಲಾ ಮುಖ್ಯಸ್ಥರು ಮತ್ತು ಪ್ರವಾಸದ ಉಸ್ತುವಾರಿ ವಹಿಸಿದ ಸಿಬ್ಬಂದಿಯವರೇ ಜವಾಬ್ದಾರರಾಗಿರುತ್ತಾರೆ.

CLICK HERE TO DOWNLOAD ORDER

Leave a Comment