Shaktiyojane Smart Card-2025: ಮಹಿಳಾ ಫಲಾನುಭವಿಗಳಿಗೆ ಶೀಘ್ರದಲ್ಲಿ ಸ್ಮಾರ್ಟ್ ಕಾರ್ಡ್!

Shaktiyojane Smart Card-2025: ಮಹಿಳಾ ಫಲಾನುಭವಿಗಳಿಗೆ ಶೀಘ್ರದಲ್ಲಿ ಸ್ಮಾರ್ಟ್ ಕಾರ್ಡ್!

 

Shaktiyojane Smart Card:ಕರ್ನಾಟಕ ರಾಜ್ಯದ ಮಹಿಳೆಯರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ/ವಾಕರಸಾ ಸಂಸ್ಥೆ/ಈಕರಸಾ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸಂಬಂಧ ರಾಜ್ಯ ಸರ್ಕಾರವು ಮಹಿಳಾ ಪ್ರಯಾಣಿಕರಿಗೆ ಮಹಿಳಾ ಪ್ರಯಾಣಿಕರು ತಮ್ಮ ಪ್ರಯಾಣದ ಸಮಯದಲ್ಲಿ ಸಾಮಾನ್ಯ ಸ್ಥಾಯಿ ಆದೇಶದಲ್ಲಿ ನಿಗದಿಪಡಿಸಲಾಗಿರುವ ಆಧಾರ್ ಕಾರ್ಡ್ ಮೂಲ/ನಕಲು/ಡಿಜಿಲಾಕರ್ (ಹಾರ್ಡ್ ಮತ್ತು ಸಾಪ್ಟ್ ಕಾಪಿ ) ಮಾದರಿಯಲ್ಲಿ ಹಾಜರುಪಡಿಸಿ ಪ್ರಯಾಣಿಸಲು ಅನುಮತಿಸಲಾಗಿತ್ತು!

ಮಹಿಳಾ ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯ ಸರ್ಕಾರವು ಇದೀಗ ಮಹಿಳೆಯರಿಗಾಗಿ ಜಾರಿ ಮಾಡಲಾಗಿದ್ದ ಶಕ್ತಿ ಯೋಜನೆಯನ್ನು ಸರಳೀಕರಣ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಮಹಿಳಾ ಪ್ರಯಾಣಿಕರು ಆಧಾರ್ ಕಾರ್ಡ್ ಇಟ್ಟುಕೊಂಡು ಪ್ರಯಾಣಿಸುವಾಗ ಕಿರಿ ಕಿರಿ ತಪ್ಪಿಸಲು ಸಾರಿಗೆ ಬಸ್ಸಿನಲ್ಲಿ ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್ ತೋರಿಸಿ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಬಹುದಾಗಿದೆ.

ಶೀಘ್ರದಲ್ಲಿ ಮಹಿಳೆಯರು ಸ್ಮಾರ್ಟ್ ಕಾರ್ಡ್ ನ್ನು ಉಚಿತವಾಗಿ ಪಡೆಯಬಹುದಾಗಿದೆ. ಈಗಾಗಲೇ ಕಡತವು  ಹಣಕಾಸು ಇಲಾಖೆಗೆ ಕಳುಹಿಸಲಾಗಿದ್ದು,ಒಂದೆರಡು ತಿಂಗಳುಗಳಲ್ಲಿ ಸ್ಮಾರ್ಟ್ ಕಾರ್ಡ್ ಮಹಿಳೆಯರ ಕೈ ಸೇರಲಿದೆ.

ಮಹಿಳೆಯರು ಸ್ಮಾರ್ಟ್ ಕಾರ್ಡ್ ಬೇಕು ಅಂದರೆ, ಗ್ರಾಮ ಒನ್, ಬೆಂಗಳೂರು ಒನ್‌ನಲ್ಲಿ ಅರ್ಜಿ ಹಾಕಿದರೆ, ಸ್ಮಾರ್ಟ್ ಕಾರ್ಡ್ ಸಿಗಲಿದೆ. ಇನ್ನೆರಡು ತಿಂಗಳುಗಳಲ್ಲಿ ಸ್ಮಾರ್ಟ್ ಕಾರ್ಡ್ ದೊರೆಯಲಿದೆ. ಸರ್ಕಾರದಿಂದ ಪ್ರತ್ಯೇಕ ಸ್ಮಾರ್ಟ್‌ ಕಾರ್ಡ್‌ಗಳ ವಿತರಣೆ ಇರಲ್ಲ. ಸ್ಮಾರ್ಟ್ ಕಾರ್ಡ್ ಪಡೆಯುವ ವೇಳೆ ನಕಲಿ ಆಧಾ‌ರ್ ಕಾರ್ಡ್ ನೀಡಿ ತಗಲಾಗಿಕೊಂಡರೆ ನಿಮ್ಮ ಅರ್ಜಿಯನ್ನೇ ರದ್ದುಗೊಳಿಸುವ ಸಾಧ್ಯತೆ ಇರಲಿದೆ.

ಆರ್ಥಿಕ ಇಲಾಖೆಗೆ ಪ್ರಸ್ತಾವನೆ, ಒಪ್ಪಿಗೆ ಬಳಿಕ ಟೆಂಡರ್ ಪ್ರಕ್ರಿಯೆ

ರಾಜ್ಯ ಸರ್ಕಾರ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯನ್ನು ಸರಳೀಕರಿಸಲು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುವುದಕ್ಕೆ ಸಾರಿಗೆ ಇಲಾಖೆ ಚಿಂತನೆ ನಡೆಸಿದೆ. ರಾಜ್ಯ ಸರ್ಕಾರವು ಶಕ್ತಿ ಯೋಜನೆ ಜಾರಿಯಾದ ಕೆಲವೇ ತಿಂಗಳಲ್ಲಿ ಫಲಾನುಭವಿಗಳಿಗೆ ಸ್ಟಾರ್ಟ್ ಕಾರ್ಡ್ ನೀಡಲಿದೆ ಎಂದು ತಿಳಿಸಿತ್ತು. ಆ ಬಳಿಕ ಒಂದು ಕಾರ್ಡಿಗೆ ಸುಮಾರು 17 ರಿಂದ 30 ರೂ.ವರೆಗೆ ವೆಚ್ಚವಾಗುತ್ತದೆ ಎಂದು ಸ್ಮಾರ್ಟ್‌ ಕಾರ್ಡ್ ಬಗ್ಗೆ ಆಸಕ್ತಿ ತೋರಲಿಲ್ಲ. ಆದರೆ, ಇದೀಗ ಸಾರಿಗೆ ಇಲಾಖೆಯು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಲಭಿಸಿದ ಕೂಡಲೇ ಟೆಂಡ‌ರ್ ಪ್ರಕ್ರಿಯೆ ಆರಂಭಿಸಲು ತಯಾರಿ ಮಾಡಿಕೊಂಡಿದೆ.

ಅರ್ಹ ಫಲಾನುಭವಿಗಳ ಚಿತ್ರಣ ಲಭ್ಯ:

ರಾಜ್ಯ ನಾಲ್ಕು ಸಾರಿಗೆ ನಿಗಮದಲ್ಲಿ ಲಕ್ಷಾಂತರ ಮಹಿಳೆಯರು ಪ್ರಯಾಣಮಾಡುವಮೂಲಕ ಬಸ್ಸಿನಲ್ಲಿ ದಿನನಿತ್ಯ ಜನ ಜಂಗುಳಿ ಉಂಟಾಗುತ್ತದೆ. ಹೀಗಿರುವಾಗ ನಿರ್ವಾಹಕರಿಗೆ ಪ್ರತಿ ದಾಖಲೆ ಪರಿಶೀಲಿಸಲು ಕಷ್ಟವಾಗುತ್ತಿದೆ. ಆದ್ದರಿಂದ ಇನ್ನು ಮುಂದಿನ ದಿನಗಳಲ್ಲಿ ಸ್ಮಾರ್ಟ್ ಕಾರ್ಟ್ ಬಂದರೆ ನಿರ್ವಾಹಕರಿಗೆ ಕೆಲಸ ಸುಲಭವಾಗಲಿದೆ. ಜತೆಗೆ ಶಕ್ತಿ ಯೋಜನೆಯ ಅರ್ಹ ಫಲಾನುಭವಿಗಳ ಚಿತ್ರಣ ಲಭ್ಯವಾಗಲಿದೆ. ಈವರೆಗೆ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ ತೋರಿಸಬೇಕಿತ್ತು. ಮುಂದಿನ ದಿನಗಳಲ್ಲಿ ಸ್ಮಾರ್ಟ್‌ ಕಾರ್ಡ್ ಚಲಾವಣೆಗೆ ಬಂದರೆ ಮಹಿಳೆಯರು ಸ್ಮಾರ್ಟ್ ಕಾರ್ಡ್ ತೋರಿಸಿ ಪ್ರಯಾಣ ಮಾಡಬಹುದಾಗಿದೆ.

ಪ್ರಿಂಟ್ ಆದ ಮಾಹಿತಿಯುಳ್ಳ ದಾಖಲೆಯೇ ಸ್ಮಾರ್ಟ್ ಕಾರ್ಡ್ ಆಗಿರಲಿದೆ. ಮಾಸಿಕ ಪಾಸಿನ ತರಹ ಪ್ರತ್ಯೇಕ ಪಾಸ್ ವಿತರಣೆ ಇರಲ್ಲ. ಅರ್ಜಿ ಸಲ್ಲಿಸಿದ ಕೂಡಲೇ ನೀಡಲಾಗುವ ಪ್ರಿಂಟ್‌ ಔಟ್ ಅನ್ನು ಸ್ಮಾರ್ಟ್ ಕಾರ್ಡ್ ಎಂದು ಪರಿಗಣಿಸಲಾಗುತ್ತದೆ.

ಸೇವಾಸಿಂಧು ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ. ಆಧಾರ್ ಕಾರ್ಡ್‌ನ್ನು ದಾಖಲೆಯಾಗಿ ಪರಿಗಣಿಸಿ ರಾಜ್ಯದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗತ್ತದೆ. ಸೇವಾಕೇಂದ್ರದಲ್ಲಿಯೇ ಸ್ಮಾರ್ಟ್‌ ಕಾರ್ಡ್ ಪ್ರಿಂಟ್ ಹಾಕಲಾಗುತ್ತದೆ.

ನಮ್ಮ ರಾಜ್ಯದ ನಿವಾಸಿಗೆ ಮಾತ್ರ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತದೆ. ಆಧಾ‌ರ್ ಕಾರ್ಡ್‌ನಲ್ಲಿ ಕೇವಲ ಕರ್ನಾಟಕದೊಳಗಿನ ವಿಳಾಸ ಇರಬೇಕು. ಶಕ್ತಿ ಯೋಜನೆಯ ಲಾಭಕ್ಕಾಗಿ ಆಧಾರ್ ಕಾರ್ಡ್‌ಲ್ಲಿ ವಿಳಾಸ ಬದಲಿಸಿಕೊಂಡರೆ ಸ್ಮಾರ್ಟ್ ಕಾರ್ಡ್ ಸಿಗೋದು ಅನುಮಾನ ಎಂದು ಹೇಳಲಾಗುತ್ತಿದೆ.

ಇದನ್ನೂ ನೋಡಿ….1ನೇ ತರಗತಿ ಪ್ರವೇಶಕ್ಕೆ ಮಕ್ಕಳಿಗೆ 6 ವರ್ಷ ಕಡ್ಡಾಯವಲ್ಲ!

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!