Shortage of Teachers: ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ಕುರಿತಾಗಿ ಸದನದಲ್ಲಿ ಕೇಳಿದ ಪ್ರಶ್ನೆಗೆ ಉತ್ತರ
Shortage of Teachers:
ಪ್ರಶ್ನೆ : 2022-23 ಹಾಗೂ 2023-24 ನೇ ಸಾಲಿನಲ್ಲಿ ಸಾರ್ವತ್ರಿಕವಾಗಿ ಶಿಕ್ಷಕರು ವರ್ಗಾವಣೆಯಾದ ಪ್ರಯುಕ್ತ ಕಲ್ಯಾಣ ಕರ್ನಾಟಕ ಪ್ರದೇಶದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಯಂ ಶಿಕ್ಷಕರ ಕೊರತೆಯಿಂದ ಅತಿಥಿ ಶಿಕ್ಷಕರಿಂದ ಶಾಲೆಗಳಲ್ಲಿ ಪ್ರವಚನ ತರಗತಿಗಳು ನಡೆಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯ:
ಉತ್ತರ: ಬಂದಿದೆ.
ಪ್ರಶ್ನೆ : ಬಂದಿದ್ದರೇ, ಖಾಯಂ ಶಿಕ್ಷಕರ ನೇಮಕಾತಿ ಮಾಡಲು ಸರ್ಕಾರ ಯಾವ ಕ್ರಮ ಕೈಗೊಂಡಿದೆ:
ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಲು ಹಾಗೂ ಆರ್.ಟಿ.ಇ ನಿಯಮಗಳನ್ವಯ 2021-22ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇದ್ದ ಪದವೀಧರ ಪ್ರಾಥಮಿಕ ಶಿಕ್ಷಕರು (6 ರಿಂದ 8ನೇ ತರಗತಿ) 15000 ಹುದ್ದೆಗಳ ಪೈಕಿ ಈಗಾಗಲೇ 12285 ಅಭ್ಯರ್ಥಿಗಳನ್ನು ಕೌನ್ಸಿಲಿಂಗ್‌ಮೂಲಕ ಶಾಲೆಗಳಿಗೆ ಸ್ಥಳ ನಿಯುಕ್ತಿಗೊಳಿಸಲಾಗಿದೆ.
ಪ್ರಸ್ತುತ ರಾಜ್ಯದಲ್ಲಿ ಬೋಧನಗೆ ಅವಶ್ಯಕತೆ ಇರುವ ಪಿಎಸ್‌ಟಿ ಮತ್ತು ಜಿಪಿಟಿ ವೃಂದದ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ಖಾಯಂ ಹುದ್ದೆ ಭರ್ತಿ ಆಗುವವರೆಗೂ ಅಥವಾ ಶೈಕ್ಷಣಿಕ ಸಾಲಿನ ಅಂತ್ಯದವರೆಗೂ ತಾತ್ಕಾಲಿಕವಾಗಿ ಒಟ್ಟು 35000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡು ಶಿಕ್ಷಕರ ಕೊರತೆಯನ್ನು ನೀಗಿಸಲಾಗಿದೆ.
ಸರ್ಕಾರದ ಆದೇಶ ಸಂಖ್ಯೆ: ಇಪಿ 230 ಪಿಬಿಎಸ್ 2024, ದಿನಾಂಕ:07.10.2024 ರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ 07 ಜಿಲ್ಲೆಗಳಲ್ಲಿ ಖಾಲಿಯಿರುವ ಪ್ರೌಢ ಶಾಲಾ ಸಹ ಶಿಕ್ಷಕರ ಒಟ್ಟು ಹುದ್ದೆಗಳಲ್ಲಿ 385 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಲಾಗಿರುತ್ತದೆ.
ಸರ್ಕಾರದ ಪತ್ರ ಸಂಖ್ಯೆ: ಇಪಿ 14 ಎಲ್‌ಬಿಪಿ 2022, ದಿನಾಂಕ:13/09/2022ರ ವತ್ರದಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ವಿವಿಧ ವೃಂದದ ದೈಹಿಕ ಶಿಕ್ಷಣ ಶಿಕ್ಷಕರ 200 ಹುದ್ದೆಗಳು ಸೇರಿ ಒಟ್ಟು 2500 ಶಿಕ್ಷಕರುಗಳ ಹುದ್ದೆಗಳನ್ನು 15000 ಪದವೀಧರ ಪ್ರಾಥಮಿಕ ಶಾಲಾ ನೇಮಕಾತಿಯಲ್ಲಿ ಭರ್ತಿಯಾಗದೇ ಖಾಲಿ ಉಳಿದ ಹುದ್ದೆಗಳಿಗೆ ಹೊಂದಾಣಿಕ ಮಾಡಿಕೊಳ್ಳುವ ಷರತ್ತಿಗೆ ಒಳಪಟ್ಟು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರವು ಅನುಮತಿ ನೀಡಿರುತ್ತದೆ.
ಆದರೆ ಸದರಿ 15000 ಹುದ್ದೆಗಳಲ್ಲಿ ಪ್ರೌಢಶಾಲಾ ಶಿಕ್ಷಕರುಗಳ ನೇಮಕಾತಿಗೆ 1648 ಹುದ್ದೆಗಳು ಮಾತ್ರ ಉಳಿದಿರುವ ಪ್ರಯುಕ್ತ ಪ್ರಸ್ತುತ ಸಾಲಿನಲ್ಲಿ ಒಟ್ಟು 2500 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಪ್ರಸ್ತಾವನೆಯ ಬಗ್ಗೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಪತ್ರ ಸಂಖ್ಯೆ: ಸಿ4(1) ಸ.ಪ್ರೌ.ಶಾ.ಶಿನೇ / 46 /2021-22/2-1407683 ದಿನಾಂಕ::22/05/2024ರ ಕಡತವನ್ನು ಆರ್ಥಿಕ ಇಲಾಖೆಗೆ ಕಳುಹಿಸಲಾಗಿದ್ದು, ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಲಾಗುತ್ತಿದೆ.
ಸುತ್ತೋಲೆ ಸಂಖ್ಯೆ:ಸಿಆಸುಇ 388 ಸನನಿ 2024 ದಿನಾಂಕ:25.11.2024 ರನ್ವಯ ದಿನಾಂಕ:28.10.2024 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ರಾಜ ಸಿವಿಲ್‌ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಲಾಗಿದೆ.
ಪ್ರಶ್ನೆ: ಪ್ರೌಢ ಶಾಲೆಗಳಲ್ಲಿ TALP ಅಡಿಯಲ್ಲಿ 2010 ರಿಂದ ಕಂಪ್ಯೂಟರ್ ಆಧಾರಿತ ತರಗತಿಗಳನ್ನು ನಡೆಸಲಾಗುತ್ತಿದ್ದು ಇದುವರೆಗೂ ಕಂಪ್ಯೂಟರ್ ಶಿಕ್ಷಕರನ್ನು ನೇಮಕ ಮಾಡಿಕೊಂಡಿಲ್ಲದಿರವುದರಿಂದ
ವಿದ್ಯಾರ್ಥಿಗಳು ಕಂಪ್ಯೂಟರ್ ಶಿಕ್ಷಣದಿಂದ ವಂಚಿತರಾಗುತ್ತಿರುವುದರಿಂದ ಕಂಪ್ಯೂಟರ್ ಶಿಕ್ಷಕರನ್ನು ನೇಮಿಸಿಕೊಳ್ಳುವ ಪ್ರಸ್ತಾವನೆ ಸರ್ಕಾರದ ಮುಂದಿದೆಯೇ;
ಉತ್ತರ:
ಪ್ರಶ್ನೆ : 2006 ಇಲ್ಲಿಯವರೆಗೆ ಪ್ರೌಢಶಾಲಾ ಸಹ ಶಿಕ್ಷಕರಿಗೆ ಉಪಾಸಕರಾಗಿ ಇಲ್ಲಿ ನೀಡಿಲ್ಲದಿರುವುದರಿಂದ ಪ್ರೌಢಶಾಲಾ ಸಹ ಶಿಕ್ಷಕರಿಗೆ ಯಾವಾಗ ಬಡ್ತಿ ನೀಡಲಾಗುವುದು?
ಉತ್ತರ: ಪ್ರಸ್ತುತ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಕುರಿತಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರ ಹಂತದಲ್ಲಿ ನಾಲ್ಕು ವಿಭಾಗಗಳ ಪ್ರೌಢ ಶಾಲಾ ಶಿಕ್ಷಕರುಗಳ ಪಟ್ಟಿಯನ್ನು ಪಡೆದು ಕ್ರೋಢೀಕರಿಸಲಾಗುತ್ತಿದ್ದು, ಒಂದೇ ಸಾಮಾನ್ಯ ಅರ್ಹತಾ ಜೇಷ್ಠತಾ ಪಟ್ಟಿಯನ್ನು ತಯಾರಿಸಲು ಕ್ರಮವಹಿಸಲಾಗುತ್ತಿದೆ. ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆಯ ಬಗ್ಗೆ ತ್ವರಿತವಾಗಿ ನಿಯಮಾನುಸಾರ ಕ್ರಮವಹಿಸಲಾಗುವುದು.