SSLC and 2nd PUC EXAM- 01&02 Final Time table Released
SSLC and 2nd PUC EXAM- 01&02 Final Time table Released: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಮತ್ತು ಪರೀಕ್ಷೆ-2 ರ “ಅಂತಿಮ ವೇಳಾಪಟ್ಟಿ” ಯನ್ನು ಪ್ರಕಟಿಸಿರುವ ಕುರಿತು.
ಮೇಲಿನ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಮತ್ತು ಪರೀಕ್ಷೆ-2 ರ ಅಂತಿಮ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ದಿನಾಂಕ:04-11-2025 ರಂದು ಪ್ರಕಟಿಸಲಾಗಿದೆ. ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲಾ/ಕಾಲೇಜುಗಳ “ಪ್ರಕಟಣಾ ಫಲಕ” ದಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ.
ಸೂಚನೆಗಳು:
1. ದಿನಾಂಕ: 04.04.2026 ಶನಿವಾರದಂದು ಜೆಟಿಎಸ್ (56, 57, 58 & 59 ವಿಷಯಗಳು) ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಲಾಗುವುದು.
2. ವಿಷಯ ಸಂಕೇತ 15 ಮತ್ತು 60ರ ವಿಷಯಗಳು ಆದರ್ಶ ವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತವೆ.
3. ಹಿಂದೂಸ್ಥಾನಿ ಸಂಗೀತ ಮತ್ತು ಕರ್ನಾಟಕ ಸಂಗೀತ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಸಾಯಂಕಾಲ 5.15ರವರೆಗೆ ನಿಗದಿಪಡಿಸಿದೆ. ಸದರಿ ವಿಷಯಗಳ ಶಾತ್ವಿಕ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಮಧ್ಯಾಹ್ನ 3.45 ಗಂಟೆಯವರೆಗೆ ಮತ್ತು ಪ್ರಾಯೋಗಿಕ ಪರೀಕ್ಷೆಯನ್ನು ಮಧ್ಯಾಹ್ನ 3.45 ರಿಂದ ಸಾಯಂಕಾಲ 5.15 ಗಂಟೆಯವರೆಗೆ ನಡೆಸಲಾಗುವುದು.
4. ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಮೂರು ಗಂಟೆಯ ಪ್ರಶ್ನೆಪತ್ರಿಕೆಗೆ ಉತ್ತರಿಸಲು ಹೆಚ್ಚುವರಿಯಾಗಿ 60 ನಿಮಿಷಗಳು, ಎರಡೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 50 ನಿಮಿಷಗಳು, ಎರಡು ಗಂಟೆಯ ಪ್ರಶ್ನೆಪತ್ರಿಕೆಗೆ 40 ನಿಮಿಷಗಳು, ಒಂದೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 30 ನಿಮಿಷಗಳನ್ನು ನೀಡಲಾಗುವುದು.
5. ಪ್ರಥಮ ಭಾಷಾ ವಿಷಯಗಳು, ಕೋರ್ ವಿಷಯಗಳು ಮತ್ತು ಜೆ.ಟಿ.ಎಸ್. ವಿಷಯಗಳಿಗೆ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.15ರವರೆಗೆ ಮತ್ತು ದ್ವಿತೀಯ ಭಾಷಾ ವಿಷಯಗಳು ಹಾಗೂ ತೃತೀಯ ಭಾಷಾ ವಿಷಯಗಳಿಗೆ ಬೆಳಗ್ಗೆ 10.00ರಿಂದ ಮಧ್ಯಾಹ್ನ 1.00ರವರೆಗೆ ಪರೀಕ್ಷಾ ಅವಧಿಯನ್ನು ನಿಗದಿಪಡಿಸಿದೆ.
6. ಪ್ರಥಮ ಭಾಷಾ ವಿಷಯಗಳು, ಕೋರ್ ವಿಷಯಗಳು ಮತ್ತು ಜೆ.ಟಿ.ಎಸ್. ವಿಷಯಗಳ ಪರೀಕ್ಷೆ ಬರೆಯಲು 3.00 ಗಂಟೆ ಮತ್ತು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.
7. NSQF ವಿಷಯಗಳ ಪರೀಕ್ಷೆಯು ಬೆಳಿಗ್ಗೆ 10-00 ರಿಂದ 12-15 ರ ವರೆಗೆ ನಡೆಯಲಿದೆ.
8.NSQF ಪರೀಕ್ಷಾ ವಿಷಯಗಳ ಪರೀಕ್ಷೆ ಬರೆಯಲು 2.00 ಗಂಟೆ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.
9.ವಿಭಿನ್ನ ಸಾಮರ್ಥ್ಯವುಳ್ಳ ಅಭ್ಯರ್ಥಿಗಳು ಉತ್ತರಿಸುವ ಪರ್ಯಾಯ ವಿಷಯಗಳು ಮತ್ತು ವಿಷಯ ಸಂಕೇತಗಳ ವಿವರ ಕೆಳಕಂಡಂತಿದೆ.
CLICK HERE TO DOWNLOAD TIME TABLE