SSLC Exam-1 March/April 2026:ಅಂತಿಮ ಪ್ರವೇಶ ಪತ್ರ ಪಡೆಯುವುದು ಹೇಗೆ? ಮುಖ್ಯ ಸೂಚನೆಗಳು ಪ್ರಕಟ

SSLC Exam-1 March/April 2026:ಅಂತಿಮ ಪ್ರವೇಶ ಪತ್ರ ಪಡೆಯುವುದು ಹೇಗೆ? ಮುಖ್ಯ ಸೂಚನೆಗಳು ಪ್ರಕಟ

SSLC Exam-1 March/April 2026: SSLC Exam-1 2026ಗಾಗಿ ಅಂತಿಮ ಹಾಲ್ ಟಿಕೆಟ್ ಬಿಡುಗಡೆ ಕುರಿತು ಅಧಿಕೃತ ಮಾಹಿತಿ, ಡೌನ್‌ಲೋಡ್ ವಿಧಾನ ಮತ್ತು ವಿದ್ಯಾರ್ಥಿಗಳು ಗಮನಿಸಬೇಕಾದ ಸೂಚನೆಗಳು ಇಲ್ಲಿ ತಿಳಿದುಕೊಳ್ಳಿ.

2026ನೇ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ದಿನಾಂಕ: 02.03.2026 ರಂದು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಶಾಲಾ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಮಂಡಲಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿತರಿಸುವುದು,

1. ತಮ್ಮ ಶಾಲೆಯ ಮುಖಾಂತರ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆ ಡೌನ್ಲೋಡ್ ಮಾಡಿಕೊಂಡ ಪ್ರವೇಶ ಪತ್ರಗಳ ಸಂಖ್ಯೆಗೆ ಸರಿ ಹೊಂದುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳುವುದು. ಒಂದು ವೇಳೆ ಯಾವುದಾದರು ವಿದ್ಯಾರ್ಥಿಯ ಪ್ರವೇಶ ಪತ್ರ ಬಂದಿಲ್ಲದಿದ್ದರೆ, ಸದರಿ ವಿದ್ಯಾರ್ಥಿಯ ವಿವರವನ್ನು ಸಮರ್ಥನೆ ಮತ್ತು ದಾಖಲೆಗಳೊಂದಿಗೆ ಕೆಳಗೆ ನೀಡಿರುವ ಪರಿಶೀಲನಾ ಶಾಖೆಯ ಶಾಖಾಧಿಕಾರಿಗಳನ್ನು ಕೂಡಲೇ ಸಂಪರ್ಕಿಸುವುದು.

2. 2026 ರ SSLC ಪರೀಕ್ಷೆಗೆ CCEPF, CCEPR ಮತ್ತು CCERR ವಿದ್ಯಾರ್ಥಿಗಳು ತಮ್ಮದೇ ಲಾಗಿನ್ ಮೂಲಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಈ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿ ಲಾಗಿನ್ ಹಾಗೂ ಶಾಲಾ ಲಾಗಿನ್ ಮೂಲಕ ಲಭ್ಯಗೊಳಿಸಲಾಗಿದೆ. ಪ್ರವೇಶಪತ್ರಗಳನ್ನು Download ಮಾಡಿದ ನಂತರ ಸಂಬಂದಿಸಿದ ಮುಖ್ಯಶಿಕ್ಷಕರಿಂದ ಸಹಿ ಮತ್ತು ಮೊಹರನ್ನು ಪಡೆದು ವಿದ್ಯಾರ್ಥಿಯು ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವುದು ಕಡ್ಡಾಯವಾಗಿರುತ್ತದೆ.

3. ಉಲ್ಲೇಖಿತ ಮಾರ್ಗಸೂಚಿಯಲ್ಲಿ ವಿವರಿಸಿರುವಂತೆ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯ/ವಿನಾಯಿತಿ ನೀಡುವ ಸಂಬಂಧ ಉಪನಿರ್ದೇಶಕರ ಜ್ಞಾಪನದನ್ವಯ ದೈಹಿಕ ಸ್ಥಿತಿ, ಭಾಷಾ ವಿನಾಯಿತಿ, ಬದಲಿ ವಿಷಯಗಳ ಮಾಹಿತಿಗಳು ಪ್ರವೇಶ ಪತ್ರದಲ್ಲಿ ಮುದ್ರಿತವಾಗಿರುವ ಬಗ್ಗೆ, ಮುಖ್ಯಶಿಕ್ಷಕರು ಖಚಿತಪಡಿಸಿಕೊಳ್ಳುವುದು.

4. ಯಾವುದೇ ವಿದ್ಯಾರ್ಥಿಯ ಭಾವಚಿತ್ರ ಬದಲಾವಣೆಗೆ ಸಂಬಂಧಿಸಿದಂತೆ, ಪರೀಕ್ಷೆಗೆ ಪೂರ್ವದಲ್ಲಿ ಮಾಡಲಾದ ಬದಲಾವಣೆಗಳನ್ನು ಮಾತ್ರ ಮಂಡಲಿಯು ಪರಿಗಣಿಸುತ್ತದೆ. ಪರೀಕ್ಷಾ ನಂತರದಲ್ಲಿ ಬರುವ ವಿದ್ಯಾರ್ಥಿಗಳ ಭಾವಚಿತ್ರ ಬದಲಾವಣೆ ಕುರಿತ ಯಾವುದೇ ಮನವಿಗಳನ್ನು ಮಂಡಲಿ ಪುರಸ್ಕರಿಸುವುದಿಲ್ಲ. ಇದಕ್ಕೆ ಸಂಬಂಧಿಸಿದ ಶಾಲಾ ಮುಖ್ಯಸ್ಥರು ಹಾಗೂ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರುಗಳು ನೇರ ಜವಾಬ್ದಾರರಾಗಿರುತ್ತಾರೆ. ಒಂದು ವೇಳೆ ಇದಕ್ಕೆ ವ್ಯತಿರಿಕ್ತವಾಗಿ ಬದಲಿ ವಿದ್ಯಾರ್ಥಿ ಪರೀಕ್ಷೆ ಬರೆಯಲು ಸಹಕರಿಸಿ ಪರೀಕ್ಷಾ ಅವ್ಯವಹಾರದಲ್ಲಿ ಭಾಗಿಯಾಗಿದಲ್ಲಿ ಸಂಬಂಧಿಸಿದ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರ ಮತ್ತು ಶಾಲಾ ಮುಖ್ಯಸ್ಥರ ಮೇಲೆ ಕೆ.ಸಿ.ಎಸ್ (ಸಿ.ಸಿ.ಎ.) ನಿಯಮ-1957 ಮತ್ತು 1983ರ ಕರ್ನಾಟಕ ಶಿಕ್ಷಣ ಕಾಯ್ದೆ ಹಾಗೂ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕಾಯ್ದೆ-1966 ರನ್ವಯ ಕ್ರಮ ಜರುಗಿಸಲಾಗುವುದು.

ಮಾರ್ಚ್/ಏಪ್ರಿಲ್ -2026ರ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಅಂತಿಮ ಪ್ರವೇಶ ಪತ್ರಗಳ ಬಗ್ಗೆ, ಯಾವುದೇ ಮಾಹಿತಿ ಪಡೆಯಲು ಸಂಪರ್ಕಿಸಬೇಕಾದ ಮಂಡಲಿಯ ಪರಿಶೀಲನಾ ಶಾಖೆಯ ಅಧಿಕಾರಿಗಳ ಹೆಸರು ಮತ್ತು ಸಂಬಂಧಿಸಿದ ಜಿಲ್ಲೆಗಳ ಮಾಹಿತಿ ಕೆಳಕಂಡಂತಿದೆ.

ಶಾಲೆಗಳಿಗೆ ಪ್ರವೇಶ ಪತ್ರಗಳನ್ನು ಲಭ್ಯಗೊಳಿಸಿರುವ ಬಗ್ಗೆ, ವಿದ್ಯಾರ್ಥಿ / ಪೋಷಕರ ನೋಂದಾಯಿತ ದೂರವಾಣಿ ಸಂಖ್ಯೆಗೆ ಮಂಡಲಿಯಿಂದ ಎಸ್‌ಎಂಎಸ್ ರವಾನಿಸಲಾಗಿದೆ. ಹಾಗೆಯೇ ಮಂಡಲಿ ಜಾಲತಾಣದ ವಿದ್ಯಾರ್ಥಿಗಳ ಅಂಕಣ ಮತ್ತು ಸಾಮಾಜಿಕ ಜಾಲತಾಣವಾದ “X & Instagram ” ಖಾತೆಯ ಮೂಲಕವೂ ಸಹ ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ. ಆದ್ದರಿಂದ ತಕ್ಷಣ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಆದ್ಯತೆ ಮೇರೆಗೆ ಕಡ್ಡಾಯವಾಗಿ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ವಿತರಿಸುವುದು. ವಿನಾಕಾರಣ ಪ್ರವೇಶಪತ್ರಗಳನ್ನು ವಿದ್ಯಾರ್ಥಿಗಳಿಗೆ ವಿತರಿಸುವಲ್ಲಿ ವಿಳಂಬವಾದಲ್ಲಿ ಈ ಕುರಿತು ದೂರುಗಳು ಸ್ವೀಕೃತವಾದಲ್ಲಿ ಸಂಬಂಧಪಟ್ಟ ಶಾಲಾ ಮುಖ್ಯಶಿಕ್ಷಕರ ವಿರುದ್ಧ ಸೂಕ್ತಕ್ರಮ ಜರುಗಿಸಲಾಗುವುದು.

ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವಾಗ ತಾಂತ್ರಿಕ ಸಮಸ್ಯೆಗಳು ಉದ್ಭವಿಸಿದ್ದಲ್ಲಿ ಮಾತ್ರ ದೂರವಾಣಿ ಸಂಖ್ಯೆ:080-29720438 ಗೆ ಸಂಪರ್ಕಿಸಬಹುದಾಗಿದೆ.

SSLC Exam

 

CLICK HERE TO DOWNLOAD

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!