SSLC EXAM:CBSE ಮಾದರಿಯಲ್ಲಿ SSLC ಪರೀಕ್ಷೆ|ಪಾಸಾಗಲು ಇನ್ನು ಕನಿಷ್ಠ 33 ಅಂಕ ಸಾಕು!

SSLC EXAM:CBSE ಮಾದರಿಯಲ್ಲಿ SSLC ಪರೀಕ್ಷೆ|ಪಾಸಾಗಲು ಇನ್ನು ಕನಿಷ್ಠ 33 ಅಂಕ ಸಾಕು! ಒಂದು ವಿಷಯದಲ್ಲಿ 20 ಆಂತರಿಕ ಅಂಕ, ಅಖಿತ ಪರೀಕ್ಷೆಯಲ್ಲಿ 13 ಬಂದರೂ ತೇರ್ಗಡೆ

SSLC EXAM: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಿಬಿಎಸ್‌ಇ ಮಾದರಿ ಅಳವಡಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಸ್ತಾಪನೆ ಸಲ್ಲಿಸಿದ್ದು, ಇನ್ನು ಮುಂದೆ ಕನಿಷ್ಠ 33 ಅಂಕ ಪಡೆದ ವಿದ್ಯಾರ್ಥಿಗಳನ್ನೂ ಪಾಸ್ ಮಾಡಲಾಗುತ್ತದೆ.

ಇನ್ನು ಮುಂದೆ ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ಮಕ್ಕಳು ಸಿಬಿಎಸ್‌ಇ ಮಾದರಿಯಲ್ಲಿ SSLC ಪರೀಕ್ಷೆ ಬರೆಯಲಿದ್ದಾರೆ.

33 ಅಂಕ ಬಂದರೆ ಇನ್ನು ಉತ್ತೀರ್ಣ:

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಸೇರಿ ಪ್ರಥಮ ಭಾಷೆಯನ್ನು 125ಕ್ಕೆ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ದ್ವಿತೀಯ ಹಾಗೂ ತೃತೀಯ ಭಾಷಾ ವಿಷಯಗಳ ಪರೀಕ್ಷೆಯನ್ನು 100 ಅಂಕಗಳಿಗೆ ನಡೆಸಲಾಗುತ್ತದೆ. ಇದರಲ್ಲಿ ಪ್ರಥಮ ಭಾಷೆ 25 ಹಾಗೂ ಉಳಿದ ಇತರೆ ವಿಷಯಗಳಲ್ಲಿ ತಲಾ 20 ಅಂಕಗಳು ಆಂತರಿಕ ಮೌಲ್ಯಮಾಪನಕ್ಕೆ ನಿಗದಿ ಮಾಡಲಾಗಿದೆ.

 

ಸಿಬಿಎಸ್‌ಇ ಮಾದರಿಯ ಹೊಸ ನಿಯಮ ಜಾರಿಯಾದರೆ ಒಬ್ಬ ವಿದ್ಯಾರ್ಥಿ ಒಂದು ವಿಷಯದಲ್ಲಿ 20 ಆಂತರಿಕ ಅಂಕ ಪಡೆದರೆ, ಲಿಖಿತ ಪರೀಕ್ಷೆಯಲ್ಲಿ 13, ಹೀಗೆ ಒಟ್ಟು 33 ಅಂಕ ಬಂದರೂ ಸಾಕು ಆ ವಿಷಯದಲ್ಲಿ ತೇರ್ಗಡೆಯಾಗುತ್ತಾನೆ. ಇದೇ ಮಾದರಿಯನ್ನು ರಾಜ್ಯ ಪಠ್ಯಕ್ರಮದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಳವಡಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಒಟ್ಟಾರೆ ಅಂಕ 625ರಿಂದ 600ಕ್ಕೆ ಇಳಿಕೆ:

ಕನ್ನಡ ಸೇರಿದಂತೆ ಎಸ್ಸೆಸ್ಸೆಲ್ಸಿ ಪ್ರಥಮ ಭಾಷಾ ಪರೀಕ್ಷೆಯ ಅಂಕವನ್ನು 125ರ ಬದಲು 100ಕ್ಕೆ ಸೀಮಿತಗೊಳಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದೆ. 2026ರ ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಇತರೆ ಐದು ವಿಷಯಗಳಂತೆ ಕನ್ನಡಕ್ಕೂ 125ರ ಬದಲಿಗೆ 100 ಅಂಕಕ್ಕೆ ಇಳಿಸುವ ಚಿಂತನೆಗಳು ನಡೆದಿವೆ. ಈ ಮೂಲಕ ಒಟ್ಟಾರೆ ಅಂಕಗಳು 625ರಿಂದ 600ಕ್ಕೆ ಇಳಿಯಲಿವೆ.

ನಿವೃತ್ತ ಪ್ರಾಧ್ಯಾಪಕ ಗಣೇಶ್ ಭಟ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಪರೀಕ್ಷೆ ಸುಧಾರಣಾ ಸಮಿತಿಯು, ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಒಂದು ಅಂಕದ, ಬಹು ಆಯ್ಕೆಯ ಪ್ರಶ್ನೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಅಳವಡಿಸಲು, ಪ್ರತಿ ವಿಭಾಗದಲ್ಲೂ ಹೆಚ್ಚು ಪ್ರಶ್ನೆಗಳನ್ನು ನೀಡಿ, ಯಾವುದಾದರೂ ಎರಡು, ಮೂರು, ನಾಲ್ಕು ಪ್ರಶ್ನೆಗಳನ್ನು ಆಯ್ಕೆ ಮಾಡಿಕೊಂಡು ಉತ್ತರ ಬರೆಯುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ನೀಡಲು ಸಮಿತಿ ಚರ್ಚೆ ನಡೆಸಿದೆ.

ಸಿಬಿಎಸ್‌ಇ ಮಾದರಿಯ ಹೊಸ ನಿಯಮ ಜಾರಿಯಾದರೆ ಒಬ್ಬ ವಿದ್ಯಾರ್ಥಿ ಒಂದು ವಿಷಯದಲ್ಲಿ 20 ಆಂತರಿಕ ಅಂಕ ಪಡೆದರೆ, ಲಿಖಿತ ಪರೀಕ್ಷೆಯಲ್ಲಿ 13 ಬಂದರೂ ತೇರ್ಗಡೆಯಾಗುತ್ತಾನೆ. ಈಗಿರುವ SSLC ಪರೀಕ್ಷಾ ನಿಯಮದ ಪ್ರಕಾರ ಒಬ್ಬ ವಿದ್ಯಾರ್ಥಿ ಉತ್ತೀರ್ಣರಾಗಲು ಶೇ. 35 ಅಂಕಗಳನ್ನು ಪಡೆಯಬೇಕು.

ಈ ಹಿಂದಿನಿಂದಲೂ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು ಬೇರೆ ರಾಜ್ಯಗಳಲ್ಲಿ ಇರುವಂತೆ ನಮ್ಮಲ್ಲಿಯೂ ಶೇಕಡವಾರು 33 ಪರ್ಸೆಂಟ್ ತರಬೇಕು ಎನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದ್ದು, ಈಗ ಸರ್ಕಾರಕ್ಕೆ ಶಿಕ್ಷಣ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ಇನ್ನು ಸರ್ಕಾರ 2026-27ನೇ ಸಾಲಿಗೆ ಈ ನಿಯಮ ಜಾರಿ ಮಾಡಿ ಆದೇಶ ಹೊರಡಿಸುವ ಸಾಧ್ಯತೆ ಇದೆ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!