Supreme court Order: ಎಲ್ಲ ವಿಶೇಷಚೇತನರಿಗೆ ಲಿಪಿಕಾರರ ನೆರವು-2025

Suprime court Order: ಎಲ್ಲ ವಿಶೇಷಚೇತನರಿಗೆ ಲಿಪಿಕಾರರ ನೆರವು,ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಪ್ರಕಟ.

Supreme Court Order: ವಿಶೇಷಚೇತನರಿಗೆ ಸಂಬಂಧಿಸಿದಂತೆ ಇರುವ ನಿಗದಿತ ಮಾನದಂಡಗಳನ್ನು ಪೂರೈಸದಿರುವ ఎల్ల ಅಂಗವಿಕಲರೂ ಪರೀಕ್ಷೆಗಳನ್ನು ಬರೆಯಲು ಲಿಪಿಕಾರರ ನೆರವನ್ನು ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನಿರ್ದಿಷ್ಟ ಅಂಗವೈಕಲ್ಯದ ಪ್ರಮಾಣ ಶೇ.40ಕ್ಕಿಂತಲೂ ಹೆಚ್ಚಿರುವ ವ್ಯಕ್ತಿಗೆ ಸಕ್ಷಮ ಪ್ರಾಧಿ ಕಾರವು ಪ್ರಮಾಣಪತ್ರ ನೀಡುತ್ತದೆ. ಆದರೆ, ಈ ಮಾನದಂಡ ಪೂರೈಸಲು ಆಗದ ಅಂಗವಿಕಲರಿಗೂ ಈ ಸೌಲಭ್ಯ ವಿಸ್ತರಿಸುವಂತೆ ನ್ಯಾಯಾಲಯ ನಿರ್ದೇಶಿಸಿದೆ.

ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದೀವಾಲಾ ಮತ್ತು ಆರ್. ಮಹದೇವನ್ ಅವರಿದ್ದ ಪೀಠವು, ಈ ನಿಟ್ಟಿನಲ್ಲಿ ಸಮರ್ಪಕ ಮತ್ತು ನ್ಯಾಯಯುತ ಅನುಸರಣೆಯನ್ನು ಖಚಿತಪಡಿಸಿಕೊಳ್ಳುವುದು ಕೇಂದ್ರ ಸರಕಾರದ ಜವಾಬ್ದಾರಿ ಎಂದು ಹೇಳಿದೆ.

2022ರ ಆಗಸ್ಟ್ 10ರಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ವಿಶೇಷಚೇತನರಿಗೆ ನೀಡಲಾಗುವ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಜ್ಞಾಪಕಪತ್ರ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಗುಲ್ಕನ್ ಕುಮಾರ್ ಎಂಬವರು ನ್ಯಾಯಾ ಲಯದ ಮೊರೆ ಹೋಗಿದ್ದರು. ಸಚಿವಾಲಯವು ಶೇ.40ಕ್ಕಿಂತ ಕಡಿಮೆ ಅಂಗವೈಕಲ್ಯ ಹೊಂದಿರುವ ವಿಶೇಷಚೇತನ ಅಭ್ಯರ್ಥಿಗಳಿಗೆ ಪ್ರಯೋಜನವನ್ನು ವಿಸ್ತರಿಸಲು ಯತ್ನಿಸುತ್ತಿದೆ. ಆದರೂ, ಸಮಂಜಸವಾದ ತತ್ವಗಳನ್ನು ಅಳವಡಿಸಿಕೊಳ್ಳಲು ವಿಫಲವಾಗಿದೆ ಎಂದು ವಾದಿಸಿದರು.

ಅರ್ಜಿದಾರರ ವಾದವನ್ನು ಒಪ್ಪಿದ ಪೀಠವು, ವಿಶೇಷಚೇತನರಿಗೆ ಸಂಬಂಧಿಸಿದ ನೀತಿಗಳನ್ನು ಅನುಷ್ಠಾನಗೊಳಿಸುವಲ್ಲಿ ಗೊಂದಲ ಮತ್ತು ತಾರತಮ್ಯವಿದೆ. ಈ ಕುರಿತು ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದೆ.

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!