Teacher Recuritment: ಶೀಘ್ರದಲ್ಲೇ 18 ಸಾವಿರ ಶಿಕ್ಷಕರ ನೇಮಕಾತಿ.
Teacher Recuritment:ಶಿಕ್ಷಣ ಕ್ಷೇತ್ರದಲ್ಲಿ ನೂತನ ಪ್ರಯೋಗ, ಕೌಶಲ್ಯಕ್ಕೆ ಒತ್ತು: ಸಚಿವ ಮಧು
ಮಕ್ಕಳಿಗೆ ಶಾಲಾ ಹಂತದಲ್ಲಿ ಕೌಶಲ್ಯಗಳ ಕಲಿಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ‘ಸ್ಕಿಲ್ ಯೆಟ್ ಸ್ಕೂಲ್’ ಹಾಗೂ ‘ಎಐ ಆಧಾರಿತ ಕಲಿಕೆ’ಗೆ ಒತ್ತು ನೀಡಲು ಈ ಬಾರಿ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿ ‘ಯಲ್ಲಿ ಮಾತನಾಡಿದ ಅವರು, ಕಲಿಕೆಯಲ್ಲಿ ಸುಧಾರಣೆ ತರಲು ಅನೇಕ ಹೊಸ ಕ್ರಮ ಕೈಗೊಳ್ಳಲಾಗಿದೆ. ಕಲ್ಯಾಣ ಕರ್ನಾಟಕಕ್ಕೆ 5600, ಬೇರೆ ಕಡೆ 5 ಸಾವಿರ ಒಟ್ಟಾರೆಯಾಗಿ 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ಆಗಲಿದೆ. ಶಿಕ್ಷಣ ಇಲಾಖೆಗೆ ಹೆಚ್ಚಿನ ಒತ್ತು ನೀಡಿದ್ದು ಈ ಬಾರಿಯ ಬಜೆಟ್‌ನಲ್ಲಿ 45 ಸಾವಿರ ಕೋಟಿ ಮೀಸಲಿಡಲಾಗಿದೆ. ಕಳೆದ ಬಾರಿ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಲಾಗಿತ್ತು. ಈ ಬಾರಿ ಕಲಿಕೆಗೆ ಒತ್ತು ನೀಡಲಾಗಿದೆ ಎಂದರು.
ಈ ಬಾರಿ ಪರೀಕ್ಷೆಯಲ್ಲಿ ಬಿಗಿಕ್ರಮ ಕೈಗೊಂಡಿದ್ದೆವು. ಗ್ರೇಸ್ ಮಾರ್ಕ್ಸ್ ಕೂಡ ಇನ್ನುಮುಂದೆ ಇರುವುದಿಲ್ಲ. ಆದರೆ ಎಲ್ಲ ಶಾಲೆಗಳಿಗೆ ಟಾರ್ಗೆಟ್ ಕೊಟ್ಟಿದ್ದೇವೆ. ಗಣಿತ-ಗಣಕ, ಇಂಗ್ಲಿಷ್ ಕನ್ನಡ ಟೀಚರ್‌ಲೆಸ್ ಶಿಕ್ಷಣ ಸ್ಕಿಲ್ ಯೆಟ್ ಸ್ಕೂಲ್, ಭಾಷಾ ಪರಿಣಿತಿ, ಓದು ಕರ್ನಾಟಕ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಓದುವ ಪರಿಜ್ಞಾನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಶಿಕ್ಷಣ ಸಮಿತಿ ರಚನೆ:
ಪಕ್ಷಾತೀತವಾಗಿ ಎಲ್ಲಾ ಶಾಸಕರು ತಮ್ಮ ವ್ಯಾಪ್ತಿಯಲ್ಲಿನ ಅತ್ಯಂತ ಕಡಿಮೆ ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಗಳ ಮಕ್ಕಳನ್ನು ಸಮೀಪದ ಸರ್ಕಾರಿ ಶಾಲೆಗಳಿಗೆ ದಾಖಲು ಮಾಡಿ, ವಾಹನ ವ್ಯವಸ್ಥೆ ಮಾಡುವಂತೆ ಕೋರಿದ್ದಾರೆ. 1 ಸಾವಿರ ಕೆಪಿಎಸ್ ಶಾಲೆಗಳಿದ್ದು, ಅವುಗಳಿಗೆ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಿ ಉತ್ತಮ ಶಿಕ್ಷಣ ನೀಡಬಹುದು. ಈ ನಿಟ್ಟಿನಲ್ಲಿ ಅಧ್ಯಯನ ನಡೆಸಲು ಶಿಕ್ಷಣ ಸಮಿತಿ ರಚಿಸಿದ್ದು, ಸಮಿತಿ ಅಧ್ಯಯನ ನಡೆಸಿ ವರದಿ ನೀಡಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.