Teacher Recuritment: ಶಾಲಾ ಶಿಕ್ಷಕರ ನೇಮಕ, ಡಿಪ್ಲೊಮಾಗೆ ಮಾನ್ಯತೆ ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ.
Teacher Recuritment: ರಾಷ್ಟ್ರೀಯ ಮುಕ್ತ ಶಾಲೆ ಸಂಸ್ಥೆ (ಎನ್‌ಐಒಎಸ್) ಮೂಲಕ 18 ತಿಂಗಳ ಡಿಪ್ಲೊಮಾ ಇನ್ ಎಲಿಮೆಂಟರಿ ಎಜುಕೇಷನ್ ವಿದ್ಯಾರ್ಹತೆ ಪಡೆದ ಅಭ್ಯರ್ಥಿಗಳನ್ನು ಕೇಂದ್ರೀಯ ವಿದ್ಯಾಲಯಗಳ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಕೊನೆಗೂ ಪರಿಗಣಿಸಲಾಗುತ್ತಿದೆ.
ಸುಪ್ರೀಂ ಕೋರ್ಟ್ ಆದೇಶದನ್ವಯ ಕೇಂದ್ರೀಯ ವಿದ್ಯಾಲಯ ಸಂಘಟನೆ (ಕೆವಿಎಸ್) ಒಟ್ಟು 175 ಅಭ್ಯರ್ಥಿಗಳನ್ನು ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ದಾಖಲಾತಿ ಪರಿಶೀಲನೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಕೆವಿಎಸ್ 2022ರಲ್ಲಿ ಒಟ್ಟು 6,414 ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿತ್ತು. ಈ ವೇಳೆ ಮುಕ್ತ ಶಾಲೆಯ ಡಿಪ್ಲೊಮಾ ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಲಾಗಿತ್ತು. ಇದನ್ನು ಪ್ರಶ್ನಿಸಿ ಅಭ್ಯರ್ಥಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
2023ರಲ್ಲಿ ಸುಪ್ರೀಂ ಕೋರ್ಟ್ ಕೂಡ ಈ ಅಭ್ಯರ್ಥಿಗಳು ಹುದ್ದೆಗೆ ಅರ್ಹರಲ್ಲ ಎಂದೇ ಹೇಳಿತ್ತು. ಈ ವಿಷಯಕ್ಕೆ ಸ್ಪಷ್ಟನೆ ನೀಡಿರುವ ಸುಪ್ರೀಂ ಕೋರ್ಟ್, ಡಿಪ್ಲೊಮಾ ಪಡೆದು ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳು, ಬೇರೆಡೆ ನೇಮಕಾತಿ ಹಾಗೂ ಬಡ್ತಿಗೆ ಅರ್ಹರಾಗಿದ್ದಾರೆ ಎಂದು ತಿಳಿಸಿದೆ.