TEACHER RECURITMENT -2025: ಶಿಕ್ಷಕರ ಹುದ್ದೆಗಳ ಭರ್ತಿಗೆ ವಾರದೊಳಗೆ ಅಧಿಸೂಚನೆ: ಸಿಎಂ
TEACHER RECURITMENT -2025: ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಎಸ್ಸೆಸ್ಸೆಲ್ಸಿ ರಫಲಿತಾಂಶದಲ್ಲಿ ಕುಸಿತ ಕಂಡ ಹಿನ್ನೆಲೆಯಲ್ಲಿ ಖಾಲಿ ಇರುವ 5,267 ಶಿಕ್ಷಕರನ್ನು ನೇಮಕ ಮಾಡಲು ಸೂಚನೆ ನೀಡಲಾಗಿದೆ ಎಂದು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸಲು ನಮ್ಮ ಸರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸಮಾಜ ಕಲ್ಯಾಣ, ಬಿಸಿಎಂ ಇಲಾಖೆ ಹಾಗೂ ಅಲ್ಪಸಂಖ್ಯಾತರ ಇಲಾಖೆಯ ವತಿಯಿಂದ ಹೊಸದಾಗಿ ವಸತಿ ಶಾಲೆ ಹಾಗೂ ವಸತಿ ನಿಲಯಗಳನ್ನು ನಿರ್ಮಿಸಲಾಗುತ್ತಿದೆ ಎಂದರು. ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ರಚಿಸಲು ಆದೇಶ ಹೊರಡಿಸಲಾಗಿದ್ದು, ಒಂದೇ ವಾರದೊಳಗೆ ಹುದ್ದೆ ಸಹಿತ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು.
ಕಲಬುರಗಿ: ಹಿಂದೆ ಘೋಷಿಸಿದಂತೆ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚನೆಗೆ ಸಂಪುಟ ಅನುಮೋದನೆ ನೀಡಿದ್ದು, ಮುಂದಿನ ವಾರದೊಳಗೆ ಈ ಸಚಿವಾಲಯದ ಹುದ್ದೆಗಳು ಸೇರಿದಂತೆ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
5,267 ಶಿಕ್ಷಕರ ಹುದ್ದೆಗಳ ಭರ್ತಿಗೆ ಸೂಚನೆ: ಸಿಎಂ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಗಳಲ್ಲಿ ಉತ್ತೀರ್ಣರಾಗುವವರ ಪ್ರಮಾಣ ತೀರಾ ಕಡಿಮೆ ಇದೆ. ಶಿಕ್ಷಣದ ಗುಣಮಟ್ಟ ಕಾಪಾಡಲು ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳ ಭರ್ತಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕಲ್ಯಾಣ ಕರ್ನಾಟಕ ಭಾಗವು (ಹೈದರಾಬಾದ್ ಕರ್ನಾಟಕ) ಹೈದರಾಬಾದ್ ನಿಜಾಮನ ಆಡಳಿತದಿಂದ ಮುಕ್ತಿ ಹೊಂದಿ, ಭಾರತಕ್ಕೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಸಿಎಂ ಬುಧವಾರ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ‘ಕಲ್ಯಾಣ ಕರ್ನಾಟಕ ಉತ್ಸವ’ಕ್ಕೆ ಚಾಲನೆ ನೀಡಿ ಮಾತನಾಡಿದರು.
‘ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಹೆಚ್ಚಳ ಹಾಗೂ ವಸತಿ ನಿಲಯ ಕಟ್ಟಡ ನಿರ್ಮಾಣ ಹೀಗೆ ಅನೇಕ ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಕಳೆದ ಎರಡು ವರ್ಷದಿಂದ ‘ಅಕ್ಷರ ಆವಿಷ್ಕಾರ’ ಕಾರ್ಯಕ್ರಮ ರೂಪಿಸಿ ಇದೂವರೆಗೆ 6 ಸಾವಿರ ಕೋಟಿ ರೂಪಾಯಿಗಳಿಗಿಂತ ಹೆಚ್ಚಿನ ಅನುದಾನಗಳನ್ನು ಖರ್ಚು ಮಾಡಲಾಗಿದೆ. ಈ ವರ್ಷದಿಂದ 10ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿಗಳನ್ನು ಪ್ರಾರಂಭಿಸುತ್ತಿದ್ದೇವೆ’ ಎಂದು ಹೇಳಿದರು.
‘ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಒಟ್ಟು 350 ಕೆಪಿಎಸ್ ಶಾಲೆಗಳನ್ನು ಮುಂದಿನ ಎರಡು ವರ್ಷಗಳಲ್ಲಿ ನಿರ್ಮಿಸುವ ಗುರಿ ಹೊಂದಿದ್ದೇವೆ. ಇದಲ್ಲದೆ ಉನ್ನತ ಶಿಕ್ಷಣಕ್ಕೂ ಕಳೆದ ಎರಡು ವರ್ಷಗಳಲ್ಲಿ 250 ಕೋಟಿ ರೂ.ಗಳನ್ನು ಒದಗಿಸಿದ್ದೇವೆ ಎಂದರು.
7 ಜಿಲ್ಲೆಗಳಲ್ಲಿ 204 ಕೋಟಿ ರೂ ವೆಚ್ಚದಲ್ಲಿ ವಸತಿ ನಿಲಯಗಳು, ಜಿಲ್ಲೆಯಲ್ಲಿ 2,515 ಅಂಗನವಾಡಿ ಕಟ್ಟಡ ನಿರ್ಮಾಣ ಮಾಡುತ್ತಿದ್ದೇವೆ. ಈ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತಯಾರಿಕೆಗೆ ವಿಶೇಷ ತರಬೇತಿ ಕೇಂದ್ರ ನಿರ್ಮಾಣ ಮಾಡಲಾಗಿದೆ’ ಎಂದರು.
ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ 220 ಕೋಟಿ
ಕಲಬುರಗಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ನಿಮ್ಹಾನ್ಸ್ ಆಸ್ಪತ್ರೆ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕಾಗಿ 220 ಕೋಟಿ ರೂ. ಅಲ್ಲದೇ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಮಾಡುತ್ತಿದ್ದೇವೆ. 9 ಕೋಟಿ ರೂ. ವೆಚ್ಚದಲ್ಲಿ ಕೆಕೆಆರ್‌ಡಿಬಿ ಹಾರ್ಟ್‌ಲೈನ್‌ಗೆ ಚಾಲನೆ ನೀಡುತ್ತಿದ್ದೇವೆ. ಆ ಮೂಲಕ ಕಲಬುರಗಿಯನ್ನ ಪ್ರಾದೇಶಿಕ ಹೆಲ್ತ್ ಹಬ್ ನಿರ್ಮಾಣ ಮಾಡುವ ಗುರಿಯತ್ತ ಹೆಜ್ಜೆ ಇಟ್ಟಿದ್ದೇವೆ ಎಂದು ಹೇಳಿದರು.
‘ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ದೊರೆತರೂ ಇದುವರೆಗೆ ಇಲ್ಲಿ ಸಚಿವಾಲಯ ಸ್ಥಾಪನೆಯಾಗಿರಲಿಲ್ಲ. ಇದನ್ನು ಮನಗಂಡ ನಮ್ಮ ಸರ್ಕಾರವು ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಸಚಿವಾಲಯವನ್ನು ಸ್ಥಾಪಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಮುಂದಿನ ವಾರದೊಳಗೆ ಹುದ್ದೆಗಳ ಸಮೇತ ಅಧಿಸೂಚನೆ ಹೊರಡಿಸುತ್ತೇವೆ’ ಎಂದು ಹೇಳಿದರು.

▪️ಯುಪಿಐ ನಿಯಮ ಬದಲಾವಣೆಯ ವಿವರ ಹೀಗಿದೆ ನೋಡಿ.
▪️WhatsApp- Aadhaar Card: ವಾಟ್ಸಾಪ್ ಮೂಲಕ ಆಧಾರ್ ಡೌನ್‌ಲೋಡ್ ಮಾಡುವುದು ಹೇಗೆ ಇಲ್ಲಿದೆ ಮಾಹಿತಿ
I want