Teacher Transfer-2024-25 ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಮುಖ್ಯ ಮಾಹಿತಿ ಇದೀಗ ಪ್ರಕಟ!
Teacher Transfer-2024-25 ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಮುಖ್ಯ ಮಾಹಿತಿ ಇದೀಗ ಪ್ರಕಟ! ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ ಹೆಚ್ಚುವರಿ ಪಟ್ಟಿಯಲ್ಲಿರುವ ಶಿಕ್ಷಕರು / ಕೋರಿಕೆ ವರ್ಗಾವಣೆ ಅರ್ಜಿ ಸಲ್ಲಿಸಿರುವ ಶಿಕ್ಷಕರುಗಳಿಗೆ ಆಕ್ಷೇಪಣೆ ಸಲ್ಲಿಸಲು ಹಾಗೂ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮವಹಿಸಲು ಕಾಲಾವಕಾಶ ನೀಡುವ ಬಗ್ಗೆ
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮ-2020 (2020 ರ ಕರ್ನಾಟಕ ಅಧಿನಿಯಮ ಸಂಖ್ಯೆ: 04) ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ನಿಯಮಗಳು-2020 ರ ಹಾಗೂ ವರ್ಗಾವಣೆ ತಿದ್ದುಪಡಿ ಕಾಯ್ದೆ ಮತ್ತು ನಿಯಮಗಳು-2022 ಪ್ರಕಾರ 2024-25 ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು ಉಲ್ಲೇಖ-1 ರ ವರ್ಗಾವಣಾ ವೇಳಾಪಟ್ಟಿಯಂತೆ ಹೆಚ್ಚುವರಿ ಶಿಕ್ಷಕರ ಆಕ್ಷೇಪಣೆಗಳನ್ನು ವಿಭಾಗೀಯ ಸಹ ನಿರ್ದೇಶಕರಿಗೆ ಸಲ್ಲಿಸಲು ದಿನಾಂಕ : 25-08-2025 ಹಾಗೂ ಕೋರಿಕೆ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಶಿಕ್ಷಕರು ಆಕ್ಷೇಪಣೆಗಳನ್ನು ಸಲ್ಲಿಸಲು ವಿಭಾಗೀಯ ಸಹ ನಿರ್ದೇಶಕರಿಗೆ ಸಲ್ಲಿಸಲು ದಿನಾಂಕ : 29-08-2025 ರವರೆಗೆ ಕಾಲಾವಕಾಶ ನೀಡಲಾಗಿತ್ತು.
ಆದರೆ ವಿಭಾಗೀಯ ಸಹ ನಿರ್ದೇಶಕರುಗಳು ಸದರಿ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ ದೃಢಪಡಿಸಿಕೊಂಡು ತಂತ್ರಾಂಶದಲ್ಲಿ ಇಂದೀಕರಿಸಲು ಕಾಲಾವಕಾಶ ಕೋರಿ ಉಲ್ಲೇಖ-3 ರಂತೆ ಮನವಿ ಸಲ್ಲಿಸಿರುತ್ತಾರೆ. ಈ ಸಂಬಂಧ ಉಲ್ಲೇಖ-2 ರಂತೆ ಮಾನ್ಯ ಸರ್ಕಾರ ಪ್ರಧಾನ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಂಗಳೂರು ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಿದಂತೆ ಈ ಕೆಳಗಿನಂತೆ ಕಾಲಾವಕಾಶ ನೀಡಲಾಗಿದೆ.
1. ಹೆಚ್ಚುವರಿ ಪಟ್ಟಿಯಲ್ಲಿರುವ ಶಿಕ್ಷಕರು ತಮ್ಮ ಆಕ್ಷೇಪಣೆಗಳನ್ನು ಆಯಾ ವ್ಯಾಪ್ತಿಯ ವಿಭಾಗೀಯ ಸಹನಿರ್ದೇಶಕರಿಕೆ ಸಲ್ಲಿಸಲು ಕಾಲಾವಕಾಶ- 29-08-2025 ರ ವರೆಗೆ
2. ವಿಭಾಗೀಯ ಸಹನಿರ್ದೇಶಕರು ಹೆಚ್ಚುವರಿ ಪಟ್ಟಿಯಲ್ಲಿರುವ ಶಿಕ್ಷಕರು ಸಲ್ಲಿಸಿರುವ ಆಕ್ಷೇಪಣೆಗಳನ್ನು ಆಲಿಸಿ, ನಿಯಮಾನುಸಾರ ಪರಿಶೀಲಿಸಿ ತಂತ್ರಾಂಶದಲ್ಲಿ ಇಂದೀಕರಿಸಲು ಕಾಲಾವಕಾಶ- 30-08-2025
3. ಕೋರಿಕೆ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಶಿಕ್ಷಕರು ತಮ್ಮ ಆಕ್ಷೇಪಣೆಗಳನ್ನು ಆಯಾ ವ್ಯಾಪ್ತಿಯ ವಿಭಾಗೀಯ ಸಹನಿರ್ದೇಶಕರಿಕೆ ಸಲ್ಲಿಸಲು ಕಾಲಾವಕಾಶ- 01-09-2025
4. ಕೋರಿಕೆ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಶಿಕ್ಷಕರು ಸಲ್ಲಿಸಿರುವ ಆಕ್ಷೇಪಣೆಗಳನ್ನು ಆಲಿಸಿ, ನಿಯಮಾನುಸಾರ ಪರಿಶೀಲಿಸಿ ತಂತ್ರಾಂಶದಲ್ಲಿ ಇಂದೀಕರಿಸಲು ಕಾಲಾವಕಾಶ- 02-09-2025
5. ಶಿಕ್ಷಕರು ತಮ್ಮ ಸೇವಾ ವಿವರಗಳನ್ನು ಇಇಡಿಎಸ್ ತಂತ್ರಾಂಶದಲ್ಲಿ ಅಂತಿಮವಾಗಿ ಇಂದೀಕರಿಸಲು ಕಾಲಾವಕಾಶ- 01-09-2025
6. ಖಾಲಿ ಹುದ್ದೆಗಳನ್ನು ಪರಿಶೀಲಿಸಿ ದೃಢೀಕರಿಸಿಕೊಳ್ಳಲು ಕಾಲಾವಕಾಶ- 02-09-2025
7.ಮಂಜೂರಾದ ಹುದ್ದೆಗಳ ವರ್ಗಾವಣೆ ಅರ್ಜಿಗಳ ಮತ್ತು ಖಾಲಿ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಕಾರ್ಯಗಳನ್ನು ತಂತ್ರಾಂಶದಲ್ಲಿ ಇಂದೀಕರಿಸುವುದು- 04-09-2025
ವರ್ಗಾವಣೆ ಪ್ರಕ್ರಿಯೆಯ ಮುಂದಿನ ಚಟುವಟಿಕೆಗಳನ್ನು ಪರಿಷ್ಕೃತ ವೇಳಾಪಟ್ಟಿಯಲ್ಲಿ ಪ್ರಕಟಿಸಲಾಗುವುದು. ಎಂದು ತಿಳಿಸಲಾಗಿದೆ.