Teacher Transfer Update: 2025-26 ಸಾಲಿನ ಅಂತಿಮ Weighted Marks ಬಿಡುಗಡೆ

Teacher Transfer Update: 2025-26 ಸಾಲಿನ ಅಂತಿಮ Weighted Marks ಬಿಡುಗಡೆ

Teacher Transfer Update: 2025-26 ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ ಪೂರ್ವಭಾವಿ ಚಟುವಟಿಕೆಗಳ ಭಾಗವಾಗಿ ಡಿಸೆಂಬರ್ 2025ರ ಅಂತ್ಯಕ್ಕೆ ಶಿಕ್ಷಕರ ಅಂತಿಮ ವೇಯ್ಸಡ್ ಅಂಕಗಳನ್ನು (Weighted Marks) ತಂತ್ರಾಂಶದಲ್ಲಿ ಪ್ರಕಟಿಸಿರುವ ಬಗ್ಗೆ.

ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ (1) ಮತ್ತು (2) ರನ್ವಯ, 2025-26ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ, ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ಪ್ರಾಥಮಿಕ / ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರುಗಳ, ಡಿಸೆಂಬರ್-2025 ತಿಂಗಳ ಅಂತ್ಯದವರೆಗೂ ನವೀಕರಿಸಿದ ಶಿಕ್ಷಕರ ಸೇವಾ ವಿವರದ ಆಧಾರದ ಮೇಲೆ ಗಣನೆಗೆ ತೆಗೆದುಕೊಂಡು ಕರಡು ವೇಯ್ಲೆಡ್ ಅಂಕಗಳನ್ನು, ಇ.ಇ.ಡಿ.ಎಸ್. ತಂತ್ರಾಂಶದಲ್ಲಿನ ಶಿಕ್ಷಕರ ಲಾಗಿನ್‌ನಲ್ಲಿ ಹಾಗೂ ಇಲಾಖಾ ವೆಬ್‌ಸೈಟ್ ನಲ್ಲಿ ಉಲ್ಲೇಖ (4) ರಲ್ಲಿ ಪ್ರಕಟಿಸಲಾಗಿರುತ್ತದೆ.

ಉಲ್ಲೇಖ (3) ಈ ಕಛೇರಿಯ ಸುತ್ತೋಲೆಯಲ್ಲಿ ಸೇವಾ ಮಾಹಿತಿಯ ಇಂದೀಕರಣಕ್ಕಾಗಿ ದಿನಾಂಕ : 30-01-2026 ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು. ಉಲ್ಲೇಖ (4) ರಲ್ಲಿ ದಿನಾಂಕ : 27-02-2026 ರವರೆಗೆ ವಿಸ್ತರಿಸಿ ಕಾಲಾವಕಾಶವನ್ನು ನೀಡಲಾಗಿತ್ತು.

ಮುಂದುವರೆದು ವರ್ಗಾವಣೆ ಪೂರ್ವದಲ್ಲಿ ವಿವಿಧ ಕಾರ್ಯಗಳ ನಿರ್ವಹಿಸಬೇಕಾಗಿರುವುದರಿಂದ ಮತ್ತು ಈಗಾಗಲೇ ಇ.ಇ.ಡಿ.ಎಸ್ ನಲ್ಲಿ ಮಾಹಿತಿ ಇಂದೀಕರಣಕ್ಕಾಗಿ ಸಾಕಷ್ಟು ಕಾಲಾವಕಾಶವನ್ನು ನೀಡಿರುವುದರಿಂದ ಇನ್ನು ಮುಂದೆ ಇ.ಇ.ಡಿ.ಎಸ್ ನಲ್ಲಿ ಇಂದೀಕರಣ / ತಿದ್ದುಪಡಿ / ಬದಲಾವಣೆಯನ್ನು ವರ್ಗಾವಣೆಗೆ ಪರಿಗಣಿಸಲಾಗುವುದಿಲ್ಲ.

ಅಂತಿಮವಾಗಿ ಪ್ರಕಟಿಸಲ್ಪಟ್ಟ ಸೇವಾ ಅಂಕಗಳನ್ನೇ ಪ್ರಸಕ್ತ ಸಾಲಿನಲ್ಲಿ ನಡೆಯುವ ವರ್ಗಾವಣೆಯ ಎಲ್ಲಾ ಪ್ರಕ್ರಿಯೆಗಾಗಿ ಪರಿಗಣಿಸಲಾಗುವುದು ಹಾಗೂ ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ /ಪ್ರೌಢಶಾಲಾ ಸಹಶಿಕ್ಷಕರ / ದೈಹಿಕ ಶಿಕ್ಷಣ ಶಿಕ್ಷಕರು/ ವಿಶೇಷ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು / ತತ್ಸಮಾನ ವೃಂದದ ಶಿಕ್ಷಕರುಗಳ ಇಂದೀಕರಿಸಲ್ಪಟ್ಟ ಅಂತಿಮ ಸೇವಾ ಅಂಕಗಳನ್ನು (weighted score) ಇ.ಇ.ಡಿ.ಎಸ್. ತಂತ್ರಾಂಶದಲ್ಲಿನ ಶಿಕ್ಷಕರ ಲಾಗಿನ್, ಕ್ಷೇತ್ರಶಿಕ್ಷಣಾಧಿಕಾರಿಗಳ / ಉಪನಿರ್ದೇಶಕರ ಲಾಗಿನ್ ಹಾಗೂ ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಸದರಿ ಮಾಹಿತಿಯನ್ನು ಪರಿಶೀಲಿಸಿಕೊಳ್ಳಲು/ಹಾಗೂ ಎಲ್ಲಾ ಶಿಕ್ಷಕರಿಗೆ ತಲುಪಿಸಲು ಕ್ರಮವಹಿಸುವಂತೆ ಇಲಾಖೆಯ ಎಲ್ಲಾ ಕಛೇರಿಯ ಮುಖ್ಯಸ್ಥರಿಗೆ ತಿಳಿಸಿದೆ

Teacher Transfer Update

 

CLICK HERE CHECK  WEIGHTED SCORE

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!