Transfer Draft Rules: ಒಂದು ಬಾರಿಗೆ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿರುವ ಗ್ರಾಮ ಪಂಚಾಯಿತಿಗಳ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಕಡ್ಡಾಯವಾಗಿ ವರ್ಗಾವಣೆ.
Transfer Draft Rules: ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ ಸಂಖ್ಯೆ 14)ರ 3ನೇ ಪ್ರಕರಣದ (1)ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸದರಿ ಅಧಿನಿಯಮದ 3ನೇ ಪ್ರಕರಣದ 2(ಎ) ಉಪ ಪ್ರಕರಣದಲ್ಲಿ ಅಗತ್ಯಪಡಿಸಲಾದಂತೆ, ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1 ಮತ್ತು 2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) (ತಿದ್ದುಪಡಿ) ನಿಯಮಗಳು, 2025 ರ ಕರಡನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: RDPR/57 /GPK/2025 (E), ದಿನಾಂಕ: 17-07-2025 ರ ಮೂಲಕ ಕರ್ನಾಟಕ ವಿಶೇಷ ರಾಜ್ಯ ಪತ್ರದ ಭಾಗ IV A ರ ಮೂಲಕ ಪ್ರಕಟಿಸಿ ಸದರಿ ನಿಯಮಗಳಿಂದ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆ ಮತ್ತು ಸಲಹೆಗಳನ್ನು ಪ್ರಕಟಣೆಯ ದಿನಾಂಕದಿಂದ ಹದಿನೈದು ದಿನಗಳ ಒಳಗಾಗಿ ಸಲ್ಲಿಸಲು ಆಹ್ವಾನಿಸಲಾಗಿರುವುದರಿಂದ,
ಸದರಿ ಕರಡನ್ನು ದಿನಾಂಕ: 17-07-2025 ರಂದು ಸಾರ್ವಜನಿಕರಿಗೆ ದೊರೆಯುವಂತೆ ಮಾಡಲಾಗಿದ್ದರಿಂದ;
ಮತ್ತು ಈ ಸಂಬಂಧ ಸ್ವೀಕರಿಸಲಾದ ಆಕ್ಷೇಪಣೆ ಮತ್ತು ಸಲಹೆಗಳನ್ನು ಸರ್ಕಾರವು ಪರಿಗಣಿಸಿರುವುದರಿಂದ;
ಈಗ ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (1990ರ ಕರ್ನಾಟಕ ಅಧಿನಿಯಮ ಸಂಖ್ಯೆ 14) ರ 3ನೇ ಪ್ರಕರಣದ (1)ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಕಂಡ ನಿಯಮಗಳನ್ನು ರಚಿಸುತ್ತದೆ, ಏನೆಂದರೆ:-
ನಿಯಮಗಳು
1. ಶೀರ್ಷಿಕೆ ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ರಾಜ್ಯ ನಾಗರಿಕ
ಸೇವೆಗಳು (ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1 ಮತ್ತು 2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) (ತಿದ್ದುಪಡಿ) ನಿಯಮಗಳು, 2025 ಎಂದು ಕರೆಯತಕ್ಕದ್ದು.
(2) ಈ ನಿಯಮಗಳು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.
2. 4ನೇ ನಿಯಮ ತಿದ್ದುಪಡಿ. ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಹಿರಿಯ
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1 ಮತ್ತು 2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) (ತಿದ್ದುಪಡಿ) ನಿಯಮಗಳು, 2024 ರ ನಿಯಮ 4 ರ ಪರಂತು ನಂತರ ಈ ಕೆಳಕಂಡಂತೆ ಮತ್ತು ಪರಂತು ನಮೂದಿಸತಕ್ಕದ್ದು.
ಮತ್ತು ಪರಂತು, ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1 ಮತ್ತು 2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) (ತಿದ್ದುಪಡಿ) ನಿಯಮಗಳು, 2024 ಜಾರಿಗೆ ಬಂದ ನಂತರ ಒಂದು ಬಾರಿಗೆ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿರುವ ಗ್ರಾಮ ಪಂಚಾಯಿತಿಗಳ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಕಡ್ಡಾಯವಾಗಿ ವರ್ಗಾವಣೆ ಮಾಡತಕ್ಕದ್ದು.”
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
(ಡಾ|| ಎನ್. ನೋಮೆಶ್ ಕುಮಾರ್) ನಿರ್ದೇಶಕರು (ಪಂ.ರಾಜ್) ಹಾಗೂ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ.
