UGCET-2025: UG Common Entrance Test -2025 Admission Ticket Released,Here is the direct link to download the admit card.

UGCET-2025: UG Common Entrance Test -2025 Admission Ticket Released

UGCET-2025: UG Common Entrance Test -2025 Admission Ticket Released:

ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಪ್ರವೇಶಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅವಕಾಶ ಕಲ್ಪಿಸಿದೆ. ಈ ಬಾರಿ ಪ್ರವೇಶ ಪತ್ರದ ಜತೆಗೆ ಮಾದರಿ ಒಎಂಆರ್ ಕೂಡ ನೀಡುತ್ತಿರುವುದು ಅಭ್ಯಾಸದ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

▪️ವಿದ್ಯಾರ್ಥಿಗಳಿಗೆ ಸಿಗಲಿದೆ ಮಾದರಿ ಓಎಂಆರ್ ಶೀಟ್

▪️ಗೊಂದಲ ನಿವಾರಿಸಲು ಕೆಇಎಯಿಂದ ಕ್ರಮ

ಅಭ್ಯರ್ಥಿಗಳು, ಕೆಇಎ ವೆಬ್ಸೈಟ್ ನಲ್ಲಿ ನೀಡಲಾಗಿರುವ  ಪ್ರವೇಶಪತ್ರ -UGCET-2025 ಎನ್ನುವ ಲಿಂಕ್ ಮೇಲೆ ಕ್ಲಿಕ್ ಮಾಡಿ ತಮ್ಮ ಲಾಗಿನ್ ‌ ಐಡಿ, ಸಂಖ್ಯೆ, ಹೆಸರು ದಾಖಲಿಸುವುದರ ಮೂಲಕ ಪ್ರವೇಶಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ಓಟಿಪಿ ಮತ್ತು ಮುಖಚಹರೆ ಆಧಾರಿತ ಲಾಗಿನ್ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ಈ ಸಲದ ಪ್ರವೇಶಪತ್ರದಲ್ಲಿ ಪ್ರಮುಖವಾಗಿ ಕ್ಯೂಆರ್ ಕೋಡ್ ಮುದ್ರಿಸಲಾಗಿದೆ. ಜತೆಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಮಾದರಿ ಒಎಂಆರ್ ಶೀಟ್ ಹಾಗೂ ಎರಡು ಪುಟಗಳ ಮಾರ್ಗಸೂಚಿ ಪಟ್ಟಿ ನೀಡಲಾಗಿದ್ದು, ಇದನ್ನು ಡೌನ್‌ಲೊಡ್ ಮಾಡಿಕೊಂಡು ಓದಿಕೊಳ್ಳಬಹುದು. ಮಾದರಿ ಓಎಂಆರ್ ಶೀಟ್ ಅನ್ನು ವಿದ್ಯಾರ್ಥಿಗಳು ಅಭ್ಯಾಸಕ್ಕೂ ಬಳಸಿಕೊಳ್ಳಬಹುದು. ಈ ಮೂಲಕ ಪರೀಕ್ಷೆ ಸಂದರ್ಭದಲ್ಲಿ ಆಗುವ ಗೊಂದಲ, ತಪ್ಪುಗಳನ್ನು ತಪ್ಪಿಸಬಹುದು ಎಂಬುದು ಕೆಇಎ ಆಶಯವಾಗಿದೆ ಎಂದು ಪ್ರಸನ್ನ ತಿಳಿಸಿದ್ದಾರೆ.

ಏ.15ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಏ.16ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ, ಏ.17ರಂದು ಗಣಿತ ಮತ್ತು ಜೀವಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ 3,30,875 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇಷ್ಟೂ ಮಂದಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅರ್ಹತೆ ಹೊಂದಿದ್ದಾರೆ.

UGCET-25 ಪರೀಕ್ಷೆಗೆ ಪ್ರವೇಶ ಪತ್ರವನ್ನು KEA ಇದೀಗ ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಈ ಕೆಳಕಂಡ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯಾಸ ಸಲುವಾಗಿ ಪ್ರವೇಶ ಪತ್ರದ ಜತೆಗೆ ಮಾದರಿ OMR ಶೀಟು ನೀಡಲಾಗುವುದು. ಏ.15, 16 & 17ರಂದು ಪರೀಕ್ಷೆ ನಡೆಯಲಿದೆ ಎಂದು kea ತಿಳಿಸಿದೆ.

ಏ.15ರಿಂದ 17ರವರೆಗೆ ಸಿಇಟಿ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿ ಇದೀಗ ಪ್ರವೇಶ ಪತ್ರ ಪ್ರಕಟ ಮಾಡಿದೆ.

ಈ ವರ್ಷ 3 ಲಕ್ಷ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುವ ನಿರೀಕ್ಷೆಯಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ.

ಏ.18ರಂದು ಗುಡ್ ಪ್ರೈಡೇ ಇರುವುದರಿಂದ ಅಂದು ನಿಗದಿಪಡಿಸಲಾಗಿದ್ದ ಕನ್ನಡ ಭಾಷೆಯ ಪರೀಕ್ಷೆಯನ್ನು ಏ.15ಕ್ಕೆ ನಿಗದಿ ಮಾಡಲಾಗಿದೆ.

ಏಪ್ರಿಲ್ 15ರಂದು ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ಕೇಂದ್ರ ಗಳಲ್ಲಿ ಮಾತ್ರ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

 

CLICK HERE TO DOWNLOAD ADMIT CARD

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!