Vacancies: ಯಾವ್ಯಾವ ಇಲಾಖೆಯಲ್ಲಿ ಎಷ್ಟು ಖಾಲಿ ಹುದ್ದೆಗಳು?ಹಾಲಿ ಭರ್ತಿಯಾಗಿರುವ ಮತ್ತು ಖಾಲಿಯಿರುವ ಹುದ್ದೆಗಳೆಷ್ಟು? ಇಂದು ಸದನದಲ್ಲಿ ಕೇಳಿದ ಪ್ರಶ್ನೆಗೆ ಉತ್ತರ. ದಿನಾಂಕ:04-03-2025
Vacancies:
ಅ) ಸರ್ಕಾರದ ವಿವಿಧ ಇಲಾಖೆಗಳಿಗೆ ಮಂಜೂರಾಗಿರುವ ಒಟ್ಟು ಹುದ್ದೆಗಳ ಸಂಖ್ಯೆ; ಇದರಲ್ಲಿ ಹಾಲಿ ಭರ್ತಿಯಾಗಿರುವ ಮತ್ತು ಖಾಲಿಯಿರುವ ಹುದ್ದೆಗಳೆಷ್ಟು?
ಆ) ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ನೌಕರರೆಷ್ಟು; (ಇಲಾಖಾವಾರು ಮಾಹಿತಿ)
ಉತ್ತರ: ಸರ್ಕಾರದ ವಿವಿಧ ಇಲಾಖೆಗಳಿಗೆ ಮಂಜೂರಾಗಿರುವ /ಹಾಲಿ ಭರ್ತಿಯಾಗಿರುವ / ಖಾಲಿ ಇರುವ / ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಒಟ್ಟು ಹುದ್ದೆಗಳ ಸಂಖ್ಯೆಯ ವಿವರವನ್ನು ಅನುಬಂಧದಲ್ಲಿ ಲಗತ್ತಿಸಿದೆ.
ಇ) ರಾಜ್ಯದ ಅನೇಕ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಭರ್ತಿಮಾಡುವ ಸಂಬಂಧ ಸರ್ಕಾರ ಕಳೆದ 3 ವರ್ಷಗಳಲ್ಲಿ ಎಷ್ಟು ಅಧಿಸೂಚನೆ ಹೊರಡಿಸಿದೆ?
ಉತ್ತರ: ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಗ್ರೂಪ್ ಎ, ಬಿ ಮತ್ತು ಸಿ ವೃಂದದ ಒಟ್ಟು 4885 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕಳೆದ 3 ವರ್ಷಗಳಲ್ಲಿ ಒಟ್ಟು 52 ಅಧಿಸೂಚನೆಗಳನ್ನು ಹೊರಡಿಸಲಾಗಿರುತ್ತದೆ.
ಈ) ಕರ್ನಾಟಕ ಲೋಕಸೇವಾ ಆಯೋಗದ ವಿಳಂಬ ಧೋರಣೆಯಿಂದ ಉದ್ಯೋಗಾಕಾಂಕ್ಷಿಗಳಿಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೇಯೇ; ಬಂದಿದ್ದಲ್ಲಿ, ಈ ಕುರಿತು ಸರ್ಕಾರದಿಂದ ಯಾವ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ?
ಉತ್ತರ:
ಆಯೋಗದಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಕಾಲಮಿತಿಯೊಳಗೆ ಮತ್ತು ಸುಲಲಿತವಾಗಿ ನಡೆಸಲು ಈ ಕೆಳಕಂಡ ಹಲವು ಅಳವಡಿಸಿಕೊಳ್ಳಲಾಗಿದೆ. ಪದ್ಧತಿಗಳನ್ನು
1.ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾಗುವ ಪ್ರಸ್ತಾವನೆಗಳಲ್ಲಿ ಹಲವಾರು ನ್ಯೂನ್ಯತೆಗಳು ಕಂಡುಬಂದಿದ್ದು ಅದರಲ್ಲೂ ವಿಶೇಷವಾಗಿ ವೃಂದ ಮತ್ತು ನೇಮಕಾತಿ ನ್ಯೂನತೆಗಳಿರುವುದರಿಂದ ನಿಯಮಗಳಲ್ಲಿ ಅವುಗಳ ಬಗ್ಗೆ ಸ್ಪಷ್ಟಿಕರಣ/ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು ಆಯೋಗವು ಕೋರಿದ ಸಂದರ್ಭದಲ್ಲಿ ಅವುಗಳನ್ನು ನೀಡಲು ನೇಮಕಾತಿ ಪ್ರಾಧಿಕಾರಗಳು ಕಾಲಾವಕಾಶ ತೆಗೆದು ಕೊಳ್ಳುತ್ತಿರುವುದು.
2.ಮೌಲ್ಯಮಾಪನ ಪ್ರಕ್ರಿಯೆಯನ್ನು ನಡೆಸುವ ಸಂದರ್ಭದಲ್ಲಿ ಮೌಲ್ಯಮಾಪಕರು ಶಾಲಾ/ಕಾಲೇಜುಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪಠ್ಯಕ್ರಮವನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಲು ಮೌಲ್ಯಮಾಪನ ಕಾರ್ಯಕ್ಕೆ ಹಾಜರಾಗುವುದಿಲ್ಲ. ಆದ್ದರಿಂದ ಮೌಲ್ಯಮಾಪನ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸಲು ಡಿಜಿಟಲ್ ಮೌಲ್ಯಮಾಪನ ಪದ್ಧತಿಯನ್ನು ಅಳವಡಿಸಿಕೊಳ್ಳಲಾಗಿದೆ.
3.ನೇಮಕಾತಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು జంటి ಪರೀಕ್ಷಾ ನಿಯಂತ್ರಕರ ಹುದ್ದೆಯನ್ನು ಸೃಜಿಸಲಾಗಿದೆ.
4.ಪರೀಕ್ಷೆಗಳನ್ನು ಪದೇ-ಪದೇ ಮುಂದೂಡುವುದನ್ನು ತಪ್ಪಿಸಿ ನೇಮಕಾತಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವ ಸಲುವಾಗಿ ವಿವಿಧ ಇಲಾಖೆಗಳ ಆಯ್ಕೆ ಪ್ರಾಧಿಕಾರಗಳು/ಕರ್ನಾಟಕ ಪರೀಕ್ಷಾ ಪ್ರಾಧಿಕಾರ/ವಿಶ್ವ ವಿದ್ಯಾಲಯಗಳು/ಮಂಡಳಿಗಳಲ್ಲದೆ ಕೇಂದ್ರ ಲೋಕಸೇವಾ ಆಯೋಗ/SSC/ NTAಗಳು ನಡೆಸುವ ಪರೀಕ್ಷೆಗಳ ದಿನಾಂಕಗಳು ಘರ್ಷಣೆಯಾಗದಂತೆ ಪರೀಕ್ಷೆ ದಿನಾಂಕಗಳನ್ನು ನಿಗದಿಪಡಿಸಲಾಗುತ್ತಿದೆ.
5.ಆಯೋಗವು ಅಧಿಸೂಚಿಸುವ ಕೆಲವು ಹುದ್ದೆಗಳ ನೇಮಕಾತಿ ಪ್ರಕ್ರಿಯೆಗಳಲ್ಲಿ ವಿಕಲಚೇತನ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸಲು ಪ್ರತ್ಯೇಕ ವೈದ್ಯಕೀಯ ಮಂಡಳಿಯನ್ನು ರಚಿಸಲು ಕ್ರಮವಹಿಸಲಾಗುತ್ತಿದೆ.
6.ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನಾ ಕಾರ್ಯವನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಕ್ರಮವಹಿಸಲಾಗುತ್ತಿದೆ.
7.ಆಯೋಗದಲ್ಲಿ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳು/ನೇಮಕಾತಿ ಪ್ರಕ್ರಿಯೆಗಳನ್ನು ಏಕ ಕಾಲದಲ್ಲಿ ನಡೆಸಬೇಕಿದ್ದು ಲಭ್ಯವಿರುವ ಅಧಿಕಾರಿ/ಸಿಬ್ಬಂದಿಗಳೊಂದಿಗೆಯೇ ಎಲ್ಲಾ ಬಗೆಯ ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕಛೇರಿಯ ನಿಗದಿತ ವೇಳೆಯ ಮುನ್ನ ಮತ್ತು ನಂತರ ಹಾಗೂ ಸಾರ್ವತ್ರಿಕ ರಜಾ ದಿನಗಳಲ್ಲಿಯೂ ಕಾರ್ಯ ನಿರ್ವಹಿಸುತ್ತಿರುತ್ತಾರೆ.
8.ನೇಮಕಾತಿ ಪ್ರಕ್ರಿಯೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮತ್ತು ನೇಮಕಾತಿ ಪ್ರಕ್ರಿಯೆಗಳನ್ನು ಕಾಲಮಿತಿಯಲ್ಲಿ ಅಂತಿಮಗೊಳಿಸಲು ತಾತ್ಕಾಲಿಕ ವೇಳಾ ಪಟ್ಟಿಯನ್ನು ಹಾಕಿಕೊಂಡು ಗುರಿಯನ್ನು ನಿಗದಿಪಡಿಸಿಕೊಂಡು ಕಾರ್ಯನಿರ್ವಹಿಸಲಾಗುತ್ತಿದೆ.
9.ಪರೀಕ್ಷೆಗಳನ್ನು ಸುಲಲಿತವಾಗಿ ನಡೆಸಲು ಎಲ್ಲಾ ಪರೀಕ್ಷಾ ಉಪಕೇಂದ್ರಗಳಿಗೆ ಸಿ.ಸಿ. ಕ್ಯಾಮರಾ ಮತ್ತು ಜಾಮರ್‌ಗಳನ್ನು ಅಳವಡಿಸಲಾಗುತ್ತಿದೆ ಹಾಗೂ ಅಭ್ಯರ್ಥಿಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅಲ್ಲದೇ ಫೇಸ್ ರೆಕಗ್ನಿಷನ್ ಮೂಲಕ ಹಾಜರಾತಿಯನ್ನು ತೆಗೆದುಕೊಳ್ಳಲಾಗುತ್ತಿದೆ.







