ಗ್ರಾಮ ಆಡಳಿತಾಧಿಕಾರಿ ನೇಮಕಾತಿ ತಾತ್ಕಾಲಿಕ ಅಂಕಪಟ್ಟಿ ಪ್ರಕಟ.
Village Administrative Officer Recruitment-2024: ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2 ರ ಅಂತಿಮ ಕೀ ಉತ್ತರಗಳನ್ನು ಮತ್ತು ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.
Village administrative Officer-2024: ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ, ದಿನಾಂಕ 27.10.2024 ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಮಾಹಿತಿಗಾಗಿ ಪ್ರಕಟಿಸಿ, ದಿನಾಂಕ 04.11.2024 ರ ವರೆಗೆ ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಪ್ರಾಧಿಕಾರಕ್ಕೆ ಸಲ್ಲಿಸುವಂತೆ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು.
ದಿನಾಂಕ 04.11.2024 ರ ವರೆಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಶಿಫಾರಸ್ಸಿನಂತೆ ಅಂತಿಮ ಕೀ ಉತ್ತರಗಳನ್ನು ಹಾಗೂ ತಾತ್ಕಾಲಿಕ ಅಂಕಪಟ್ಟಿಯನ್ನು ದಿನಾಂಕ 27.11.2024 ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದ್ದು, ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 28.11.2024 ಸಂಜೆ 4.00 ರೊಳಗೆ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಲಿಂಕ್ ಮೂಲಕ ಆಕ್ಷೇಪಣೆಯನ್ನು ಸಲ್ಲಿಸುವಂತೆ ಈ ಮೂಲಕ ತಿಳಿಸಿದೆ.
ತಾತ್ಕಾಲಿಕ ಅಂಕಗಳ ಹೊರತುಪಡಿಸಿ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಮತ್ತು ಪೂರಕ ದಾಖಲೆಗಳಿಲ್ಲದ ಆಕ್ಷೇಪಣೆಗಳನ್ನು ಪುರಸ್ಕರಿಸಲಾಗುವುದಿಲ್ಲ.